ಪುತ್ತೂರು: ದರ್ಬೆಯಲ್ಲಿ ನಿರ್ಮಾಣಗೊಂಡಿರುವ ವಾಣಿಜ್ಯ ತೆರಿಗೆ ಇಲಾಖೆಯ ನೂತನ ಕಟ್ಟಡ ವಾಣಿಜ್ಯ ಭವನದ ಉದ್ಘಾಟನೆ ನಡೆಯಲಿದ್ದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ದಿನೇಶ್ ಗುಂಡೂರಾವ್ ಆಗಮಿಸಲಿದ್ದಾರೆ.
ಅಪರಾಹ್ನ 3 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ವಲಯ, ಬೂತ್ ಮಟ್ಟದ ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ತಿಳಿಸಿದ್ದಾರೆ.