ಉಪ್ಪಿನಂಗಡಿ: ರಾಷ್ಟ್ರಮಟ್ಟದ ನೀಟ್ ಪರೀಕ್ಷೆಯಲ್ಲಿ ಇಲ್ಲಿನ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಪತ್ ಕೆ.ಎಸ್. ಉತ್ತಮ ಸಾಧನೆ ಮಾಡಿದ್ದಾರೆ.
ನೀಟ್ ಪರೀಕ್ಷೆಯಲ್ಲಿ 45958ನೇ ಕೆಟಗರಿಯ ರ್ಯಾಂಕ್ ಪಡೆದಿರುವ ಇವರು ರಾಮಕುಂಜ ನಿವಾಸಿ ಶಿವರಾಮ ನಾಯ್ಕ ಕೆ. ಮತ್ತು ಯಶೋಧ ಎಂ. ದಂಪತಿಯ ಪುತ್ರ. ಇಂದ್ರಪ್ರಸ್ಥ ಪಿಯು ಕಾಲೇಜಿನ ಒಟ್ಟು 6 ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆದಿರುತ್ತಾರೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಎಚ್.ಕೆ. ಪ್ರಕಾಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.