ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಕಡಬ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಸವಣೂರು ಇವುಗಳ ಜಂಟಿ ಆಶ್ರಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗಾಗಿ ಮಾಹಿತಿ ಕಾರ್ಯಾಗಾರವು ಜೂ.18 ರಂದು ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ಜರಗಿತು.
ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಕಾರ್ಯಾಧ್ಯಕ್ಷರಾದ ಗಿರಿಶಂಕರ ಸುಲಾಯ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಕೆ.ಸವಣೂರು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಜಾರಿ ನಿರ್ದೇಶನಾಲಯದ ವಿಶೇಷ ಸರಕಾರಿ ಅಭಿಯೋಜಕರಾದ ಮಹೇಶ್ ಕಜೆ ರವರು ಭಾಗವಹಿಸಿದರು.
ಮುಖ್ಯ ಅತಿಥಿಗಳಾಗಿ ಸರಕಾರಿ ಪದವಿ ಪೂರ್ವ ಕಾಲೇಜು ಇದರ ಪ್ರಾಂಶುಪಾಲರಾದ ಪದ್ಮಾವತಿ, ಸರಕಾರಿ ಪ್ರೌಢ ಶಾಲೆ ಸವಣೂರು ಇದರ ಮುಖ್ಯ ಗುರುಗಳಾದ ರಘು ಬಿ ಆರ್, ಜಿಲ್ಲಾ ಯುವಜನಾ ಒಕ್ಕೂಟದ ಜಿಲ್ಲಾಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ಅಧ್ಯಕ್ಷ ತಾರಾನಾಥ ಕಾಯಾರ್ಗ ಇವರು ಶುಭ ಹಾರೈಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಇದರ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಸ್ವಾಗತಿಸಿ ಪ್ರಾಸ್ತವಿಕ ಮಾತನಾಡಿದರು. ವಲಯ ಮೇಲ್ವಿಚಾರಕರಾದ ವೀಣಾ ಕೆ ವಂದಿಸಿದರು. ಶಿಕ್ಷಕ ಕಿಶನ್ ಬಿ ವಿ ಕಾರ್ಯಕ್ರಮ ನಿರೂಪಿಸಿದರು.