ನಾಳೆ(ಜೂ.19) ಒಳಮೊಗ್ರು ಗ್ರಾಪಂ ವಿಶೇಷ ಗ್ರಾಮಸಭೆ

0

ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್‌ನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು ಕೇಂದ್ರ ರಾಜ್ಯ ಹಣಕಾಸು ಯೋಜನೆಯ 2025-26ನೇ ಸಾಲಿನ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಜೂ.19 ರಂದು ಬೆಳಿಗ್ಗೆ ಗ್ರಾಪಂ ಸಭಾಂಗಣದಲ್ಲಿ ನಡೆಯಲಿದೆ.

ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರು ನೋಡೆಲ್ ಆಗಿ ಸಭಾಧ್ಯಕ್ಷತೆ ವಹಿಸಲಿದ್ದು, ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರುರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ನರೇಗಾ ಫಲಾನುಭವಿಗಳು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವಿನಾಶ್ ಬಿ.ಆರ್, ಕಾರ್ಯದರ್ಶಿ ಜಯಂತಿ ಹಾಗೂ ಸರ್ವ ಸದಸ್ಯರುಗಳು ಮತ್ತು ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here