ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯನಿಯಾದ ಲೋರಾ ಪಾಯಸ್, ಅತಿಥಿಯಾಗಿ ಮುಖೇಶ್ ಹಾಗೂ ಶಾಲಾ ಸಹ ಶಿಕ್ಷಕಿ ಸರಿತಾರವರು ಉಪಸ್ಥಿತರಿದ್ದರು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶಾಲಾ ಮುಖ್ಯೋಪಾಧ್ಯಾಯನಿಯವರು ಸ್ವಾಗತಿಸಿದರು. ಏಳನೇ ತರಗತಿಯ ವಿದ್ಯಾರ್ಥಿನಿಯಾದ ಜಿಯಾ ನವೀನ್ ರವರು ದಿನದ ಮಹತ್ವವನ್ನು ತಿಳಿಸಿದರು.
ಕಾರ್ಯಕ್ರಮದ ಅತಿಥಿಯಾದ ಮುಕೇಶ್ ರವರು ವಿದ್ಯಾರ್ಥಿ ದೆಸೆಯಲ್ಲಿ ಪರಿಸರವನ್ನು ಕಾಪಾಡುವ ಮಹತ್ವವನ್ನು ಮನಮುಟ್ಟುವಂತೆ ವಿವರಿಸಿದರು. ಶಾಲಾ ವಿದ್ಯಾರ್ಥಿಗಳು ಪರಿಸರ ಜಾಗೃತಿ ಮೂಡಿಸುವ ಹಾಡು ಹಾಗೂ ನೃತ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ನಿರ್ವಹಣೆಯನ್ನು ಶಾಲಾ ಸಹ ಶಿಕ್ಷಕಿ ಮರಿಯಾ ಲೂಸಾ ಹಾಗೂ ವಂದನಾರ್ಪಣೆಯನ್ನು ಸಹ ಶಿಕ್ಷಕಿ ದೀಪ್ತಿಯವರು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿ ವೃಂದ ಹಾಗೂ ಶಿಕ್ಷಕ ವೃಂದದವರು ಭಾಗವಹಿಸಿದ್ದರು.