ದ.ಕ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ. ಅಧಿಕಾರ ಸ್ವೀಕಾರ

0

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ. ಅವರು ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು.

ಜೂ. 17, 2023ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಮುಲ್ಲೈ ಮುಗಿಲನ್ ಅವರು 2 ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆ ಅವರಿಗೆ ವರ್ಗಾವಣೆಯಾಗಿದೆ.

ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ,ಮುಲ್ಲೈ ಮುಗಿಲನ್ ಅವರನ್ನು ಇನ್ಸ್‌ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಆಂಡ್ ಸ್ಟಾಂಪ್ಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ.

LEAVE A REPLY

Please enter your comment!
Please enter your name here