





ಪುತ್ತೂರು: ಜನ್ಮ ಫೌಂಡೇಶನ್ ಟ್ರಸ್ಟ್ ಪುತ್ತೂರು ಇದರ ನೇತೃತ್ವದಲ್ಲಿ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ,ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಇವರ ಸಹಯೋಗದೊಂದಿಗೆ ‘ ಕುರಿಯ ಮಾಡಾವು ಏಳ್ನಾಡುಗುತ್ತು ಅಮ್ಮಕ್ಕ ತ್ಯಾಂಪಣ್ಣ ರೈ ಸ್ಮರಣಾರ್ಥ’ 13ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ವಿದ್ಯಾಸಿರಿ ಪುರಸ್ಕಾರ ಕಾರ್ಯಕ್ರಮ ಜೂ.20 ರಂದು ಬೆಳಿಗ್ಗೆ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ನ ಸಭಾಂಗಣದಲ್ಲಿ ನಡೆಯಲಿದೆ. ಶಿಕ್ಷಣ ಪ್ರೇಮಿಗಳಿಗೆ ಆದರದ ಸ್ವಾಗತವಿದೆ ಎಂದು ಜನ್ಮ ಫೌಂಡೇಶನ್ ಟ್ರಸ್ಟ್ನ ಅಧ್ಯಕ್ಷ ಡಾ. ಹರ್ಷ ಕುಮಾರ್ ರೈ ಮಾಡಾವುರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








