ಪುತ್ತೂರು: ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ, ಕಿರುಕುಳ ವಿರುದ್ಧ ಉಪ್ಪಿನಂಗಡಿಯ ಹಿರಿಯ ನಾಗರಿಕ ಯು.ಜಿ.ರಾಧಾ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಣೆಗೆತ್ತಿಕೊಂಡಿರುವ ಹೈಕೋರ್ಟ್, ಕಾನೂನಿನಿಂದ ಸ್ಥಾಪಿಸಲಾದ ಕಾರ್ಯವಿಧಾನದ ಹೊರತುಪಡಿಸಿ ಅರ್ಜಿದಾರರಿಗೆ ಯಾವುದೇ ತೊಂದರೆ ನೀಡದಂತೆ ನಿರ್ಬಂಧಿಸಿ ಮಧ್ಯಂತರ ಆದೇಶ ಮಾಡಿದೆ.
ಪೊಲೀಸರು ಮಧ್ಯರಾತ್ರಿ ಮನೆಗೆ ಆಗಮಿಸಿ ಆರೋಪಿಯ ರೀತಿಯಲ್ಲಿ ಫೋಟೋ ತೆಗೆಸಿ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟು ಮಾಡಿದ್ದಾರೆಂದು ಆರೋಪಿಸಿ ಯು.ಜಿ.ರಾಧಾ ಅವರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿ, ಈ ಸಂಬಂಧ ಪ್ರತಿವಾದಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದ್ದರು. ಕರ್ನಾಟಕ ಸರಕಾರದ ಗೃಹ ಇಲಾಖೆ,ರಾಜ್ಯ ಪೊಲೀಸ್ ಮಹಾನಿರ್ದೇಶಕರು,ದ.ಕ.ಜಿಲ್ಲಾ ಪೊಲೀಸ್ ಅಽಕ್ಷಕರು,ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್, ಡಾ.ಅರುಣ್ ಕೆ.ಎಸ್ಪಿ ದ.ಕ.,ಅವಿನಾಶ್ ಗೌಡ ಎಸ್ಐ ಉಪ್ಪಿನಂಗಡಿ ಇವರನ್ನು ಪ್ರತಿವಾದಿಗಳಾಗಿ ಕಾಣಿಸಲಾಗಿದೆ.ಯು.ಜಿ.ರಾಧಾ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಸುನಿಲ್ದತ್ ಯಾದವ್ ಅವರ ಏಕಸದಸ್ಯ ಪೀಠ ವಿಚಾರಣೆಗೆತ್ತಿಕೊಂಡಿದ್ದು,ಘಟನೆಗೆ ಸಂಬಂಽಸಿ ದಾಖಲೆ ಸಮೇತ ಉತ್ತರಿಸಬೇಕು ಎಂದು ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶಿದೆ.
ಜೂನ್ 1ರಂದು ಯು.ಜಿ.ರಾಧಾ ಅವರು ಉಪ್ಪಿನಂಗಡಿ ಪೇಟೆಯಲ್ಲಿರುವ ತಮ್ಮ ಮೆಡಿಕಲ್ ಶಾಪ್ನಲ್ಲಿದ್ದಾಗ ಪೊಲೀಸರು ಮೆಡಿಕಲ್ ಟೆಸ್ಟ್ಗೆ ಬಂದಿದ್ದರು.ಮರುದಿನ ಮಧ್ಯರಾತ್ರಿ ಅವರ ಮನೆಗೆ ತೆರಳಿದ ಪೊಲೀಸರು ಅವರ ಫೋಟೋ ತೆಗೆದು ಜಿಪಿಎಸ್ ಮೂಲಕ ಅಪ್ಲೋಡ್ ಮಾಡಿದ್ದರು.ಈ ಬಗ್ಗೆ ಪ್ರಶ್ನಿಸಿದಾಗ ಎಸ್ಪಿಯವರ ಸೂಚನೆ ಇದೆ ಎಂದು ಪೊಲೀಸರು ತಿಳಿಸಿದ್ದರು. ಪೊಲೀಸರ ಈ ಕ್ರಮದ ವಿರುದ್ಧ ಜೂ.3ರಂದು ಯು.ಜಿ. ರಾಧಾ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
20 ಲಕ್ಷ ರೂ.ಮಾನನಷ್ಟ ಪರಿಹಾರ ನೀಡಬೇಕು:
ತಮ್ಮ ವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಪೊಲೀಸರು ವಿನಾ ಕಾರಣ ಕಸಿದಿದ್ದಾರೆ.ಆರೋಪಿಯ ರೀತಿ ನನ್ನನ್ನು ಪೊಲೀಸರು ನಡೆಸಿಕೊಂಡಿದ್ದು,ಇದರಿಂದ ನನ್ನ ಖಾಸಗಿತನ, ಚಾರಿತ್ರ್ಯಕ್ಕೆ ಧಕ್ಕೆಯಾಗಿದೆ.ಈ ಮೂಲಕ ನನಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾಗಿದೆ.ಹೀಗಾಗಿ ನನಗೆ 20 ಲಕ್ಷ ರೂ.ಮಾನನಷ್ಟ ಪರಿಹಾರ ನೀಡಬೇಕು ಎಂದೂ ಯು.ಜಿ.ರಾಧಾ ರಿಟ್ ಅರ್ಜಿಯಲ್ಲಿ ಕೋರಿದ್ದಾರೆ.ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ಶ್ಯಾಮ್ ಪುತ್ತೂರು ವಾದಿಸುತ್ತಿದ್ದು ಸುಯೋಗ್ ಹೇರಳೆ ವಕಾಲತ್ತು ಸಲ್ಲಿಸಿದ್ದರು.
ಜೂ.19ರಂದು ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠ,ಪ್ರಕರಣ ವಿಚಾರಣೆಯಲ್ಲಿರುವುದರಿಂದ ಕಾನೂನು ವಿಧಾನದ ಹೊರತುಪಡಿಸಿ ದೂರುದಾರರಿಗೆ ಯಾವುದೇ ರೀತಿಯ ಕಿರುಕುಳವನ್ನು ಪೊಲೀಸರು ನೀಡಬಾರದು.ದೂರುದಾರರ ಮನೆಗೆ ಪೊಲೀಸರು ಆಗಮಿಸಿದ್ದ ವಿದ್ಯಮಾನಕ್ಕೆ ಸಂಬಂಧಿಸಿ ದಾಖಲೆ ಸಲ್ಲಿಸಬೇಕು ಎಂದು ಸೂಚಿಸಿ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಿದೆ.ಘಟನೆ ಕುರಿತು ಯು.ಜಿ. ರಾಧಾ ಅವರು ರಾಜ್ಯ ಪೊಲೀಸ್ ದೂರು ಪ್ರಾಽಕಾರ ಹಾಗೂ ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ಪ್ರತ್ಯೇಕ ದೂರು ಸಲ್ಲಿಸಿದ್ದರು.