ನೆಲ್ಯಾಡಿ: ಚಲನಚಿತ್ರ ನಿರ್ದೇಶಕ, ನಿರ್ಮಾಪಕ ದಿನಕರ್ ತೂಗುದೀಪ ಅವರು ಪತ್ನಿ ಮಾನಸರೊಂದಿಗೆ ಜೂ.20ರಂದು ಸೌತಡ್ಕದ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದ ವತಿಯಿಂದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಸುಬ್ರಮಣ್ಯ ಶಬರಾಯ ಅವರು ದಿನಕರ್ ತೂಗುದೀಪ ದಂಪತಿಗೆ ಶಾಲು ಹಾಕಿ ಗೌರವ ಸಲ್ಲಿಸಿದರು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ವ್ಯವಸ್ಥಾಪನ ಸಮಿತಿಯ ಸದಸ್ಯರು, ಅರ್ಚಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.