ಉಕ್ಕುಡ: ಮನೆಯಿಂದ ಕಳವು

0

ವಿಟ್ಲ: ಮನೆಯೊಂದಕ್ಕೆ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಜೂ.19ರ ತಡರಾತ್ರಿ ವಿಟ್ಲ ಸಮೀಪದ ಉಕ್ಕುಡದಲ್ಲಿ ನಡೆದಿದೆ.


ವಿಟ್ಲದ ಅನಂತೇಶ್ವರ ದೇವಸ್ಥಾನದ ಪ್ರದಾನ ಅರ್ಚಕ ಉಕ್ಕುಡ ನಿವಾಸಿ ರಜತ್ ಭಟ್‌ರವರ ಮನೆಯಲ್ಲಿ ಈ ಕಳ್ಳತನ ನಡೆದಿದೆ.

ರಜತ್ ಭಟ್ ರವರು ಹೆಂಡತಿ ಮತ್ತು 2 ಮಕ್ಕಳೊಂದಿಗೆ ವಾಸವಾಗಿದ್ದಾರೆ. ಜೂ.19ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

LEAVE A REPLY

Please enter your comment!
Please enter your name here