ನಿಡ್ಪಳ್ಳಿ; ಪಾಣಾಜೆ ಸುಬೋಧ ಪ್ರೌಢಶಾಲೆಯಲ್ಲಿ ಹನ್ನೊಂದನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಎಸ್. ಪಿ ಅವರ ಮಾರ್ಗದರ್ಶನದಲ್ಲಿ ಆಚರಿಸಲಾಯಿತು.
ಮುಖ್ಯ ಶಿಕ್ಷಕಿ ನಿರ್ಮಲಾ ಕೆ ಪ್ರಾಣಾಯಾಮ ಹಾಗೂ ಯೋಗದ ಮಹತ್ವವನ್ನು ಮಕ್ಕಳಿಗೆ ಹೇಳಿದರು. ಸಹ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡರು.