ಆಲಂಕಾರು ದುರ್ಗಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

0

ಆಲಂಕಾರು: ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜು ಆಲಂಕಾರಿನಲ್ಲಿ ವಿಶ್ವ ಯೋಗ ದಿನಾಚರಣೆ ನಡೆಯಿತು. ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜ್ ನ ಆಡಳಿತ ಮಂಡಳಿಯ ಅಧ್ಯಕ್ಷ ದಯಾನಂದ ರೈ ಮನವಳಿಕೆ ಉದ್ಘಾಟಿಸಿ ಮಾತನಾಡಿ, ಯೋಗದ ಮಹತ್ವ ತಿಳಿಸಿ, ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಬಹಳ ಪ್ರಮುಖ್ಯತೆ ಹೊಂದಿದೆ ಎಂದು ತಿಳಿಸಿ, ವಿಶ್ವಯೋಗ ದಿನಾಚರಣೆಯ ಶುಭಾಶಯ ತಿಳಿಸಿದರು.


ಆಡಳಿತಾಧಿಕಾರಿ ಶ್ರೀಪತಿ ರಾವ್ ಎಚ್, ಪ್ರಾಂಶುಪಾಲೆ ರೂಪಾ ಜೆ ರೈ, ಮುಖ್ಯಗುರು ನವೀನ್ ರೈ, ಬೋಧಕ ಬೋಧಕೇತರ ವೃಂದದವರು ಯೋಗ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸುಮಾರು ಒಂದುವರೆ ಗಂಟೆಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೇಯಸ್ಸು ರೈ ಯವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳ ಯೋಗ ಪ್ರದರ್ಶನ ನಡೆಯಿತು.

LEAVE A REPLY

Please enter your comment!
Please enter your name here