ಪುಣಚ ಶ್ರೀದೇವಿ ವಿದ್ಯಾಕೇಂದ್ರದಲ್ಲಿ ಯೋಗ ದಿನಾಚರಣೆ

0

ಪುಣಚ : ಪುಣಚ ದೇವಿನಗರದ ಶ್ರೀದೇವಿ ವಿದ್ಯಾಕೇಂದ್ರದಲ್ಲಿ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕ, ಶ್ರೀಮಹಿಷಮರ್ದಿನಿ ಶಾಖೆ ಪುಣಚ ಇದರ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾದ SPYSS ನ ಯೋಗ ಶಿಕ್ಷಕ ದಯಾನಂದ ಪೊಯ್ಯಮೂಲೆ ಯೋಗದ ಮಹತ್ವದ ಬಗ್ಗೆ ತಿಳಿಸಿದರು.

ಶಾಲಾ ಮಕ್ಕಳಿಂದ ಯೋಗಭ್ಯಾಸ ನಡೆಸಲಾಯಿತು. ವೇದಿಕೆಯಲ್ಲಿ ಶ್ರೀದೇವಿ ಪ್ರಾಥಮಿಕ ಶಾಲಾ ಹಾಗೂ ಪ್ರೌಢಶಾಲಾ ಮುಖ್ಯಗುರುಗಳು ಉಪಸ್ಥಿತರಿದ್ದರು. ಗುರು ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here