





ಕಾಣಿಯೂರು: ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹನ್ನೊಂದನೇ ವಿಶ್ವ ಯೋಗ ದಿನಾಚಾರಣೆಯನ್ನು ಆಚರಿಸಲಾಯಿತು. ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯ ರಾಮಣ್ಣ ಗೌಡ ಮುಗರಂಜ ಉದ್ಘಾಟಿಸಿದರು.



ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಪರಮೇಶ್ವರ ಗೌಡ ಅನಿಲ ಅಧ್ಯಕ್ಷತೆಯನ್ನು ವಹಿಸಿದ್ದರು, ವೇದಿಕೆಯಲ್ಲಿ ಉಪಾಧ್ಯಕ್ಷೆ ಯಶೋಧ ನೇರೋಳ್ತಡ್ಕ ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು, ಯೋಗಶಿಕ್ಷಕರಾದ ಬಾಲಕೃಷ್ಣ ಕೆ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು.






ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರು ಉಪಸ್ಥಿತರಿದ್ದು, ಸಹಕರಿಸಿದರು, ಪೋಷಕರು ಮತ್ತು ಶಾಲಾ ಶಿಕ್ಷಕ ವೃಂದವರು ಶಾಲಾ ಮಕ್ಕಳು ಯೋಗಾಸನದಲ್ಲಿ ಭಾಗವಹಿಸಿದರು. ಶಿಕ್ಷಕಿಯರಾದ ಸುಜಯ ವಂದಿಸಿ, ವೀಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.









