ಸಂತ ಫಿಲೋಮಿನಾ ವಿದ್ಯಾಸಂಸ್ಥೆಗಳ ಕ್ಯಾಂಪಸ್ ನಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ಎನ್.ಸಿ.ಸಿ. ಆರ್ಮಿ ಮತ್ತು ನೇವಿ ಘಟಕಗಳು, ಎನ್.ಎಸ್.ಎಸ್. ಘಟಕಗಳು, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಎನ್.ಸಿ.ಸಿ. ಘಟಕಗಳು ಮತ್ತು ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಎನ್.ಸಿ.ಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಧ್ಯೇಯವಾಕ್ಯವನ್ನು ಆಧರಿಸಿ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಸಭಾಭವನದಲ್ಲಿ ಹನ್ನೊಂದನೆಯ ಅಂತರಾಷ್ಟ್ರೀಯ ಯೋಗ ದಿನಾಚರಣೆ (ಯೋಗ ಸಂಗಮ) ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಯ್ ದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂ| ಲಾರೆನ್ಸ್ ಮಸ್ಕರೇನ್ಹಸ್ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಯೋಗದ ಸಂದೇಶ ನೀಡಿದರು. ಸಂತ ಫಿಲೋಮಿನಾ ಪದವಿ ಕಾಲೇಜು (ಸ್ವಾಯತ್ತ) ಪ್ರಾಂಶುಪಾಲರಾದ ವಂ| ಡಾ| ಆಂಟನಿ ಪ್ರಕಾಶ್ ಮೊಂತೇರೊ ಮಾತನಾಡಿ ಯೋಗದ ಮಹತ್ವ ತಿಳಿಸಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ|ಅಶೋಕ್ ರಾಯನ್ ಕ್ರಾಸ್ತಾ ಹಾಗೂ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಮುಖ್ಯಗುರುಗಳಾದ ವಂ|ಮಾಕ್ಸಿಂ ಡಿಸೋಜಾರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಎನ್.ಸಿ.ಸಿ. ನೇವಲ್ ವಿಂಗ್ ಅಧಿಕಾರಿ ಕ್ಲೆಮೆಂಟ್ ಪಿಂಟೋ ಸ್ವಾಗತಿಸಿ ಸಂತ ಫಿಲೋಮಿನಾ ಕಾಲೇಜಿನ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ. ಚಂದ್ರಶೇಖರ್ ಕೆ. ವಂದಿಸಿದರು. ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನ ಎನ್.ಸಿ.ಸಿ. ನೇವಿ ವಿಂಗ್ ಅಧಿಕಾರಿ ತೇಜಸ್ವಿ ಭಟ್ ಕಾರ್ಯಕ್ರಮ ನಿರೂಪಿಸಿದರು. ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಪುಷ್ಪಾ ಎನ್. ಉಪಸ್ಥಿತರಿದ್ದರು. ಹಿರಿಯ ವಿದ್ಯಾರ್ಥಿ ಪೊನ್ನಪ್ಪ ಎ ಎಸ್. ಸಹಕರಿಸಿದರು. ಸಂತ ಫಿಲೋಮಿನಾ ಪದವಿ ಕಾಲೇಜು (ಸ್ವಾಯತ್ತ) ಎನ್.ಸಿ.ಸಿ. ಆರ್ಮಿ ವಿಂಗ್ ಅಧಿಕಾರಿ ಕ್ಯಾಪ್ಟನ್ ಜೋನ್ಸನ್ ಡೇವಿಡ್ ಸಿಕ್ವೇರ ಮತ್ತು ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಎನ್.ಸಿ.ಸಿ. ಆರ್ಮಿ ವಿಂಗ್ ಅಧಿಕಾರಿ ಚೀಫ್ ಆಫೀಸರ್ ಪೀಟರ್ ನರೇಶ್ ಲೋಬೋ ನೃತೃತ್ವ ವಹಿಸಿದ್ದರು. ಸಂತ ಫಿಲೋಮಿನಾ ಪದವಿ (ಸ್ವಾಯತ್ತ) ಹಾಗೂ ಪದವಿಪೂರ್ವ ಕಾಲೇಜುಗಳ ಎನ್.ಸಿ.ಸಿ. ಆರ್ಮಿ ಮತ್ತು ನೇವಿ ಕೆಡೆಟ್‌ಗಳು, ಸಂತ ಫಿಲೋಮಿನಾ ಪ್ರೌಢಶಾಲೆಯ ಆರ್ಮಿ ಮತ್ತು ನೇವಿ ಎನ್.ಸಿ.ಸಿ. ಕೆಡೆಟ್‌ಗಳು ಹಾಗೂ ಸಂತ ಫಿಲೋಮಿನಾ ಪದವಿ (ಸ್ವಾಯತ್ತ) ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರು, ಸಂಸ್ಥೆಗಳ ಉಪನ್ಯಾಸಕ ವೃಂದ ವಿವಿಧ ಆಸನಗಳನ್ನೊಳಗೊಂಡ ಸುಮಾರು 30 ನಿಮಿಷಗಳ ಪ್ರಾಯೋಗಿಕ ಯೋಗ ನಡೆಸಿದರು.

LEAVE A REPLY

Please enter your comment!
Please enter your name here