ಪುಣಚ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಅಡ್ಯನಡ್ಕ ಹಾಗೂ ಶಿಶು ಅಭಿವೃದ್ಧಿ ಯೋಜನೆ ವಿಟ್ಲ ಇವರ ಸಹಯೋಗದಲ್ಲಿ ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಅಡ್ಯನಡ್ಕದ ಸಭಾಂಗಣದಲ್ಲಿ ನೆಡೆಯಿತು. ಕಾರ್ಯ ಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ವೈದ್ಯಾಧಿಕಾರಿ ಡಾ. ವಿಶ್ವೇಶ್ವರ ಭಟ್ ರವರು ಯೋಗವು ನಮ್ಮ ಅರೋಗ್ಯವನ್ನು ಕಾಪಾಡುತ್ತದೆ. ನಾವು ಉತ್ತಮ ರೀತಿಯಲ್ಲಿ ಜೀವನ ನಡೆಸಬೇಕಾದರೆ ಯೋಗವನ್ನು ನಿತ್ಯ ಅಳವಡಿಸಿಕೊಳ್ಳುವುದು ಅನಿವಾರ್ಯವಾಗಿದೆ. ಆರೋಗ್ಯದಿಂದ ಯೋಗ ಶಿಕ್ಷಣ ತರಬೇತಿ ಪಡೆದುಕೊಳ್ಳಬೇಕು ಎಂದರು. ಯೋಗ ಶಿಕ್ಷಕಿ ಶಾರದ ಕೆ. ಯೋಗದ ಮಹತ್ವ ಮತ್ತು ಪ್ರಯೋಜನಗಳ ಬಗ್ಗೆ ಮಾಹಿತಿಯೊಂದಿಗೆ ಯೋಗ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರು, ಸ್ತ್ರೀಶಕ್ತಿ ಸದಸ್ಯರು ಭಾಗವಹಿಸಿದ್ದರು.
