ಪುತ್ತೂರು:ಆನಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮವನ ಎಸ್ಡಿಎಂಸಿ ಅಧ್ಯಕ್ಷ ಹರೀಶ್ ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆಗೈದು ಶುಭ ಹಾರೈಸಿದರು. ಶಾಲಾ ಮುಖ್ಯ ಗುರು ಫೇಲ್ಸಿಟಾ ಡಿ ಕುನ್ಹಾ ಸ್ವಾಗತಿಸಿ ಪ್ರಸ್ತಾವಿಕ ಮಾತನಾಡಿದರು .
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಸುಜಾತ, ನಿಕಟ ಪೂರ್ವ ಎಸ್ಡಿಎಂಸಿ ಅಧ್ಯಕ್ಷ ನಾರಾಯಣ ಸುವರ್ಣ, ಎಸ್ ಡಿ ಎಂ ಸಿ ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಛತ್ರಡ್ಕ ,ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಶಿಕ್ಷಕರಾದ ವಿಶಾಲಾಕ್ಷಿ ಹಾಗೂ ಮಾಲತಿ ಇವರುಗಳಿಂದ ವಿದ್ಯಾರ್ಥಿಗಳಿಗೆ ಯೋಗದ ಮಹತ್ವ ಹಾಗೂ ವಿವಿಧ ಆಸನಗಳನ್ನು ಮಾಡಿಸುವುದರ ಮೂಲಕ ಆಚರಿಸಲಾಯಿತು. ಶಿಕ್ಷಕರು ವೃಂದ ಸಹಕರಿಸಿದರು.