ಸರ್ವೆ ಕಲ್ಪಣೆ ಪ್ರೌಢ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಪುತ್ತೂರು: ಸರಕಾರಿ ಪ್ರೌಢಶಾಲೆ ಕಲ್ಪಣೆ ಸರ್ವೆ ಇಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಸಿದ್ದೀಕ್ ಸುಲ್ತಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ದೈ.ಶಿ.ಶಿಕ್ಷಕ ಸಹದೇವ ಯೋಗಾಸನ ಪ್ರಾಣಾಯಾಮಗಳ ಬಗ್ಗೆ ತಿಳಿಸಿದರು. ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಹಾಗೂ ಅಡುಗೆ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಶಿಕ್ಷಕ ವೆಂಕಟೇಶ್ ಬಿ ಕಾರ್ಯಕ್ರಮ ಸಂಯೋಜಿಸಿದರು. ಜ್ಯೋತಿ ಜಿ ಪ್ರಭು ಪ್ರಾರ್ಥಿಸಿದರು. ಮುಖ್ಯ ಶಿಕ್ಷಕಿ ಉಮಾವತಿ ಸ್ವಾಗತಿಸಿದರು. ಶಿಕ್ಷಕಿ ನಳಿನಿ ಡಿ ವಂದಿಸಿದರು.

LEAVE A REPLY

Please enter your comment!
Please enter your name here