ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಪುಣಚ ಗ್ರಾ.ಪಂ.ಕಛೇರಿ ಎದುರು ಜಿಜೆಪಿ ಪ್ರತಿಭಟನೆ

0

ಪುಣಚ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿ ಹಾಗೂ ಭ್ರಷ್ಟಾ ದುರಾಡಳಿತ ನೀಡುತ್ತಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿ, ಪುಣಚ ಶಕ್ತಿ ಕೇಂದ್ರ ವತಿಯಿಂದ ಜೂ.23ರಂದು ಪುಣಚ ಗ್ರಾ.ಪಂ. ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು.


ಪ್ರತಿಭಟನೆಯನ್ನು ಉದ್ದೇಶಿಸಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಗ್ರಾಮಗಳಲ್ಲಿ ಹಲವು ಸಮಸ್ಯೆಗಳು, ಮೂಲಭೂತ ಸೌಲಭ್ಯಗಳ ಕೊರತೆ ಇದೆ. ಇದಕ್ಕೆಲಾ ರಾಜ್ಯ ಸರ್ಕಾರದಿಂದ ಯಾವುದೇ ಅನುದಾನ ಬಿಡುಗಡೆ ಮಾಡುತ್ತಿಲ್ಲ. ರಾಜ್ಯದ ಕಾಂಗ್ರೆಸ್ ಸರ್ಕಾರ ಜನರಿಗೆ ಮೋಸ ಮಾಡುವಂತಹ, ಹಲವು ರೀತಿಯ ಜನ ವಿರೋಧಿ ಕಾನೂನುಗಳು ಜಾರಿಯಾಗುತ್ತಿದೆ. ಇದರಿಂದಾಗಿ ಜನ ಸಂಕಷ್ಟ ಅನುಭವಿಸುತ್ತಿದ್ದಾರೆ. ಈಗ ಉಭಯ ಜಿಲ್ಲಾ ಮಟ್ಟದಲ್ಲಿ ಹೋರಾಟ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ರಾಜ್ಯಮಟ್ಟದಲ್ಲಿ ನಡೆಯುವ ಪ್ರಮೇಯ ಬರಬಹುದು. ಗ್ರಾಮದ ಜನ ದಂಗೆ ಹೇಳುವ ಸಮಯ ಬರಬಹುದು. ಆ ಮೂಲಕ ರಾಜ್ಯ ಸರಕಾರಕ್ಕೆ ಎಚ್ಚರಿಕೆಯ ಸಂದೇಶದೊಂದಿಗೆ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಗುವುದು ಎಂದರು.


ಪುಣಚ ಗ್ರಾ.ಪಂ ಸದಸ್ಯ ರಾಮಕೃಷ್ಣ ಮೂಡಂಬೈಲು ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾ.ಪಂ ಅಧ್ಯಕ್ಷೆ ಬೇಬಿ ಪಟಿಕಲ್ಲು ಸಂದರ್ಭೋಚಿತವಾಗಿ ಮಾತನಾಡಿದರು. ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಕಾರ್ಯದರ್ಶಿ ಪ್ರೀತಂ ಪೂಂಜ ಅಗ್ರಾಳ, ದ.ಕ.ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಗುರುವಪ್ಪ ಪೂಜಾರಿ ದಲ್ಕಾಜೆಗುತ್ತು, ಪುತ್ತೂರು ಬಿಜೆಪಿ ಕಾರ್ಯಾಲಯದ ಕಾರ್ಯದರ್ಶಿ ಅಶೋಕ ಮೂಡಂಬೈಲು, ಗ್ರಾ.ಪಂ.ಉಪಾಧ್ಯಕ್ಷ ಮಹೇಶ್ ಶೆಟ್ಟಿ ಬೈಲುಗುತ್ತು, ಪುಣಚ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ವಿಶ್ವನಾಥ ರೈ ಪರಿಯಾಲು, ಪಂಚಾಯತು ಸದಸ್ಯರುಗಳು, ಪಕ್ಷದ ಹಿರಿಯರು, ಕಾರ್ಯಕರ್ತರು ಉಪಸ್ಥಿತರಿದ್ದರು. ಪುಣಚ ಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಪೂಜಾರಿ ಸ್ವಾಗತಿಸಿ, ವಂದಿಸಿದರು. ಬಳಿಕ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರವಿಯವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here