ಸವಣೂರು : ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ

0

ಸವಣೂರು : ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ,‌ ಸ್ವಪಕ್ಷದವರಿಂದಲೇ ಸಾಕ್ಷಿ ಸಮೇತ ಭ್ರಷ್ಟಾಚಾರದ ಪುರಾವೆ, ಹಿಂದೂ ದಮನ ಷಡ್ಯಂತ್ರ, ಅಭಿವೃದ್ಧಿ ಶೂನ್ಯ, ಸ್ವಪ್ರಚಾರಕ್ಕಾಗಿ ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ 11 ಜನರ ಸಾವು, ಬೆಲೆ ಏರಿಕೆ, ಕೃಷಿಕರ ಬಗ್ಗೆ ನಿರ್ಲಕ್ಷ್ಯ ಧೋರಣೆ, ಹೀಗೆ ಎರಡೇ ವರ್ಷಗಳಲ್ಲಿ ಜನಸಾಮಾನ್ಯರು ಅನುಭವಿಸುತ್ತಿರುವ ಸಂಕಷ್ಟದ ವಿರುದ್ಧ ನಾಗರಿಕರ ಪರವಾಗಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸವಣೂರು ಗ್ರಾಮ  ಪಂಚಾಯತ್ ಎದುರು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. 

ಪ್ರತಿಭಟನೆಯನ್ನು ಉದ್ದೇಶಿಸಿ ಗ್ರಾ.ಪಂ.ಸದಸ್ಯ ಗಿರಿಶಂಕರ ಸುಲಾಯ, ಸವಣೂರು ಸಿಎ ಬ್ಯಾಂಕ್ ನಿರ್ದೇಶಕ ಅಶ್ವಿನ್ ಎಲ್ ಶೆಟ್ಟಿ, ಜಿಲ್ಲಾ ಬಿಜೆಪಿ ಸದಸ್ಯ ದಿನೇಶ್ ಮೆದು ,ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ ಮಾತನಾಡಿ, ರಾಜ್ಯ ಸರಕಾರದ ಜನವಿರೋಧಿ ನೀತಿ ಹಾಗೂ ಬೆಲೆ ಏರಿಕೆ,ವಿವಿಧ ಶುಲ್ಕ ಹಾಗೂ ತೆರಿಗೆ ಏರಿಕೆ ವಿಚಾರವನ್ನು ಖಂಡಿಸಿದರು.

ಪ್ರತಿಭಟನೆಯಲ್ಲಿ  ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್.,ಉಪಾಧ್ಯಕ್ಷೆ ಜಯಶ್ರೀ ಕುಚ್ಚೆಜಾಲು ಹಾಗೂ ಸದಸ್ಯರು, ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷೆ ಆಶಾ ರೈ ಕಲಾಯಿ ಹಾಗೂ ನಿರ್ದೇಶಕರು, ಸವಣೂರು ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕರು ,ಸುಳ್ಯ ಮಂಡಲ ಎಸ್.ಟಿ.ಮೋರ್ಚಾದ ಅಧ್ಯಕ್ಷ ಗಂಗಾಧರ ಪೆರಿಯಡ್ಕ, ಪಾಲ್ತಾಡಿ ಶಕ್ತಿ ಕೇಂದ್ರ ಪ್ರಮುಖ್ ಅನ್ನಪೂರ್ಣ ಪ್ರಸಾದ್ ರೈ ಬೈಲಾಡಿ,ಪುಣ್ಚಪ್ಪಾಡಿ ಶಕ್ತಿ ಕೇಂದ್ರ ಪ್ರಮುಖ್ ಮಹೇಶ್ ಕೆ.ಸವಣೂರು, ವಿವಿಧ ಬೂತ್ ಸಮಿತಿ ಅಧ್ಯಕ್ಷ, ಕಾರ್ಯದರ್ಶಿ  ಹಾಗೂ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಸವಣೂರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ ಸ್ವಾಗತಿಸಿದರು, ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು ವಂದಿಸಿದರು. ಸುಳ್ಯ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ ಬಿ.ಕೆ.ನಿರೂಪಿಸಿದರು.

ಪ್ರತಿಭಟನೆಯ ಬಳಿಕ ಸವಣೂರು ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ವಸಂತ ಶೆಟ್ಟಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here