ಕೌಕ್ರಾಡಿ: ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

0

ನೆಲ್ಯಾಡಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಜೂ.23ರಂದು ಬೆಳಿಗ್ಗೆ ಕೌಕ್ರಾಡಿ ಗ್ರಾ.ಪಂ.ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.


ಪುತ್ತೂರು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಗೌಡ ಇಚ್ಲಂಪಾಡಿ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಕೌಕ್ರಾಡಿ ಗ್ರಾ.ಪಂ.ಅಧ್ಯಕ್ಷ ಉದಯಕುಮಾರ್ ದೋಂತಿಲ, ಮಾಜಿ ಅಧ್ಯಕ್ಷರಾದ ಲೋಕೇಶ್ ಬಾಣಜಾಲು, ಎಂ.ಕೆ.ಇಬ್ರಾಹಿಂ ಸಹಿತ ನೂರಾರು ಮಂದಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆಯ ಬಳಿಕ ಗ್ರಾ.ಪಂ.ಪಿಡಿಒ ಮೂಲಕ ರಾಜ್ಯ ಸರಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಯಿತು.

LEAVE A REPLY

Please enter your comment!
Please enter your name here