ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ನಲ್ಲಿ ಎಕ್ಸ್ಚೇಂಜ್ ಮೇಳ
ಪುತ್ತೂರು ಸ್ಕಿನ್ ಕ್ಲಿನಿಕ್ನಲ್ಲಿ ವಿಶ್ವ ತೊನ್ನು ರೋಗ ದಿನದ ಪ್ರಯುಕ್ತ ಬೆಳಿಗ್ಗೆ ೯ರಿಂದ ಉಚಿತ ಚರ್ಮರೋಗ ತಪಾಸಣೆ, ಸಲಹಾ ಶಿಬಿರ
ಪುತ್ತೂರು ತಾಲೂಕು ಆಡಳಿತ ಸೌಧ ೨ನೇ ಮಹಡಿ ಪುತ್ತೂರು ಉಪ ವಿಭಾಗಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಅಪರಾಹ್ನ ೧೧.೩೦ಕ್ಕೆ ಉಪ ವಿಭಾಗ ಮಟ್ಟದ ಜಾಗೃತಿ, ಉಸ್ತುವಾರಿ ಸಮಿತಿ ಸಭೆ, ೧೨ಕ್ಕೆ ಸಫಾಯಿ ಕರ್ಮಚಾರಿಗಳ ನಿಷೇಧ, ಪುನರ್ವಸತಿ ಸಮಿತಿ ಉಪವಿಭಾಗ ಮಟ್ಟದ ಸಮಿತಿ ಸಭೆ
ಕಾವು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಈಶ್ವರಮಂಗಲ ಶಾಖೆಯ ಸಹಕಾರಿ ಸದನದಲ್ಲಿ ಬೆಳಿಗ್ಗೆ ೧೧ಕ್ಕೆ ನೆಟ್ಟಣಿಗೆಮುಡ್ನೂರು ಗ್ರಾ.ಪಂನ ಗ್ರಾಮಸಭೆ
ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಕೇಂದ್ರ ಕಚೇರಿಯ ಸಂಗಮ ಕೃಪಾ ಸಭಾಭವನದಲ್ಲಿ ಸಂಜೆ ೫.೩೦ರಿಂದ ಯೋಗ ತರಬೇತಿ ಶಿಬಿರ
ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಅಡಿಟೋರಿಯಂನಲ್ಲಿ ಬೆಳಿಗ್ಗೆ ೯.೩೦ಕ್ಕೆ ವಿದ್ಯಾರ್ಥಿ ಸಂಘ ಉದ್ಘಾಟನೆ
ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಬೆಳಿಗ್ಗೆ ೬ರಿಂದ ಗಣಪತಿ ಹೋಮ, ಭಜನಾ ಸಂಕೀರ್ತನೆ, ೭ರಿಂದ ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ವಾಯನ ದಾನ, ಶ್ರೀಗುರು ಪೂಜೆ, ಬಾಲಭೋಜನ, ಶ್ರೀ ನಾಗದೇವರಿಗೆ ಕ್ಷೀರಾಭಿಷೇಕ, ಗೋಮಾತಾ ಪೂಜೆ, ೧೧.೩೦ಕ್ಕೆ ಸಾಮೂಹಿಕ ಕುಂಕುಮಾರ್ಚನೆ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ೬.೩೦ರಿಂದ ಶ್ರೀ ಲಕ್ಷ್ಮೀಪೂಜೆ, ಮಹಾಪೂಜೆ