ಉಪ್ಪಿನಂಗಡಿ: ಲಾರಿ ಪಲ್ಟಿ – ಚಾಲಕ ಪಾರು

0

ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಗ್ರಾಮದ ಕೊಡ್ಯಕಲ್ಲು ಎಂಬಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಬದಿಗೆ ಮಗುಚಿ ಬಿದ್ದ ಘಟನೆ ಮಂಗಳವಾರ ತಡ ರಾತ್ರಿ ಸಂಭವಿಸಿದೆ.


ಬೆಂಗಳೂರಿನಿಂದ ಮಂಗಳೂರಿಗೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗಳನ್ನು ಸಾಗಿಸುತ್ತಿದ್ದ ಈ ಲಾರಿಯು ದಾರಿ ಮಧ್ಯದ ಕೊಡ್ಯಕಲ್ಲು ಎಂಬಲ್ಲಿ ಅಪಘಾತಕ್ಕೀಡಾಯಿತು. ಘಟನೆಯಿಂದ ಲಾರಿಯು ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here