ನೆಲ್ಯಾಡಿ: ಪುತ್ತೂರು ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಜೂ.28ರಂದು ಬೆಳಿಗ್ಗೆ 11ಕ್ಕೆ ಸಂಘದ ನೆಲ್ಯಾಡಿಯಲ್ಲಿರುವ ಕೇಂದ್ರ ಕಚೇರಿಯ ಆವರಣದಲ್ಲಿ ಸಂಘದ ಅಧ್ಯಕ್ಷರಾದ ಬಿ.ಪ್ರಸಾದ್ ಕೌಶಲ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಂಘದ ಎಲ್ಲಾ ಸದಸ್ಯರು ಮಹಾಸಭೆಯ ಕಾರ್ಯಕಲಾಪಗಳಲ್ಲಿ ಭಾಗವಹಿಸುವಂತೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಪ್ರಭಾ ಕೆ.ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.