ಪುತ್ತೂರು ನಗರಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಶ್ವೇತಾ ಟಿ ನಾಯಕ್

0


ಪುತ್ತೂರು: ಪುತ್ತೂರು ನಗರಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಶ್ವೇತಾ ಟಿ ನಾಯಕ್ ಅವರು ವರ್ಗಾವಣೆಗೊಂಡಿದ್ದಾರೆ. ಅವರು ಇನ್ನು ಪೂರ್ಣಾವಧಿ ಕಾರ್ಯನಿರ್ವಹಿಸಲಿದ್ದಾರೆ.


ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅಧಿಕಾರಿಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿ ಬರುವಂತೆ ಮತ್ತು ಮುಂದಿನ ಆದೇಶದ ತನಕ ಕಾರ್ಯನಿರ್ವಹಿಸುವಂತೆ ಅಭಿವೃದ್ಧಿ ಪ್ರಾಧಿಕಾರದ ಸರಕಾರದ ಅದೀನ ಕಾರ್ಯದರ್ಶಿಯವರು ರಾಜ್ಯಪಾಲರ ಅದೇಶನಾನುಸಾರ ಆದೇಶ ನೀಡಿದಂತೆ 21 ಮಂದಿಯನ್ನು ವರ್ಗಾವಯಿಸಿದ್ದಾರೆ. ಈ ಹಿಂದೆ ಪುತ್ತೂರು ನಗರಯೋಜನಾ ಪ್ರಾಧಿಕಾರದಲ್ಲಿ ವಾರದಲ್ಲಿ ಎರಡು ಬಾರಿ ಕಾರ್ಯನಿರ್ವಹಿಸುವಂತೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಗುರುಪ್ರಸಾದ್ ಅವರು ನಿಯುಕ್ತಿಗೊಂಡಿದ್ದರು. ಇದೀಗ ಪುತ್ತೂರು ನಗರಯೋಜನಾ ಪ್ರಾಧಿಕಾರಕ್ಕೆ ಪೂರ್ಣಾವಧಿ ಸದಸ್ಯ ಕಾರ್ಯದರ್ಶಿಯಾಗಿ ಶ್ವೇತಾ ನಾಯಕ್ ವರ್ಗಾವಣೆಗೊಂಡಿದ್ದಾರೆ.

LEAVE A REPLY

Please enter your comment!
Please enter your name here