ಪುತ್ತೂರು: ಸುದಾನ ಸಮೂಹ ಶಿಕ್ಷಣ ಸಂಸ್ಥೆಗಳ ಸುದಾನ ಪಿಯು ಕಾಲೇಜಿನಲ್ಲಿ ಜಿಇಇ(JEE), ನೀಟ್ (NEET) ಮತ್ತು ಸಿಇಟಿ (CET) ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗಾಗಿ ಉಚಿತ ಕೋಚಿಂಗ್ ಪುಸ್ತಕ ವಿತರಣಾ ಕಾರ್ಯಕ್ರಮ ಜೂ.26 ರಂದು ನೆರವೇರಿತು.
ಕಾಲೇಜಿನ ಸಂಚಾಲಕರಾದ ಡಾ! ಪೀಟರ್ ವಿಲ್ಸನ್ ಪ್ರಭಾಕರ್ ರವರು ಮಾತನಾಡಿ, ಆರ್ಥಿಕವಾಗಿ ಹಿಂದಿರುವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಾದ ಅಧ್ಯಯನ ಸಾಮಗ್ರಿಗಳನ್ನು ಉಚಿತವಾಗಿ ಒದಗಿಸುವುದು ಕಾರ್ಯಕ್ರಮದ ಉದ್ಧೇಶವಾಗಿದೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಸುಪ್ರೀತ್ ಕೆ. ಸಿ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಮಹತ್ವದ ಪಾತ್ರವಹಿಸುತ್ತವೆ. ಸರಿಯಾದ ಮಾರ್ಗದರ್ಶನ ಹಾಗೂ ಗುಣಮಟ್ಟದ ಅಧ್ಯಯನ ಸಾಮಗ್ರಿಗಳು ಎಲ್ಲ ವಿದ್ಯಾರ್ಥಿಗಳಿಗೂ ಲಭ್ಯವಾಗಬೇಕು ಎಂಬುದೇ ಈ ಸಂಸ್ಥೆ ಯ ಧ್ಯೇಯವಾಗಿದೆ ಎಂದ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪ್ರಥಮ ವರ್ಷದ ವಿಜ್ಞಾನ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಿ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳುವ ವಿಶ್ವಾಸವನ್ನು ವ್ಯಕ್ತಪಡಿಸಿದರು.