
ರಾಮಕುಂಜ: ಶ್ರೀ ರಾಮಕುಂಜೇಶ್ವರ ಕಿಂಡರ್ ಗಾರ್ಟನ್‌ನಲ್ಲಿ ಜೂ.21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಶಿಕ್ಷಕರು ಯೋಗದ ತರಬೇತಿ ನೀಡಿದರು. ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಅವರು ಯೋಗದ ಕುರಿತು ಮಾಹಿತಿ ನೀಡಿದರು. ಸಂಸ್ಥೆಯ ಆಡಳಿತ ಅಧಿಕಾರಿ ಆನಂದ್ ಎಸ್.ಟಿ., ಪ್ರೌಢಶಾಲಾ ವಿಭಾಗದ ಮುಖ್ಯಗುರು ಗಾಯತ್ರಿ ಯು.ಎನ್., ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಗುರು ಲೋಹಿತಾ ಎ., ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.