ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಟ್ಯಾರ್ ನಲ್ಲಿ ಜೂ. 28 ಸಂಜೆ ವೇಳೆಗೆ ಮರವೊಂದು ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಪರಿಣಾಮ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

ಆರ್ಯಾಪು ಗ್ರಾ.ಪಂ ವ್ಯಾಪ್ತಿಯ ಸಂಟ್ಯಾರ್ ಶಾಲೆಯ ಬಳಿಯಲ್ಲಿದ್ದ ಮರ ರಸ್ತೆಗೆ ಅಡ್ಡವಾಗಿ ಬಿದ್ದ ಕಾರಣ ಎರಡೂ ಬದಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸಂಪ್ಯದಿಂದಲೇ ವಾಹನಗಳು ಸರತಿ ಸಾಲಿನಲ್ಲಿ ಚಲಿಸುತ್ತಿದ್ದವು. ಸ್ಥಳೀಯರ ಸಹಕಾರದಿಂದ ಜೆಸಿಬಿ ಮೂಲಕ ಮರವನ್ನು ತೆರವು ಮಾಡಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು.