ನೆಲ್ಯಾಡಿ: ರಾಜ್ಯ ಸರಕಾರದ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗ ರೆಡ್ಡಿ ಅವರು ಜೂ.30ರಂದು ಸಂಜೆ ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಸಚಿವರೊಂದಿಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತ ಡಾ. ವೆಂಕಟೇಶ್ ಇದ್ದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಮಣ್ಯ ಶಬರಾಯ ಅವರು ಸಚಿವರಿಗೆ ಶಾಲು ಹಾಕಿ ಗೌರವಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವಿಶ್ವನಾಥ್ ಪೂಜಾರಿ ಕೊಲ್ಲಾಜೆ, ಪ್ರಮೋದ್ ರೆಖ್ಯ, ಗಣೇಶ್ ಕಾಶಿ, ಲೋಕೇಶ್ವರಿ ವಿನಯಚಂದ್ರ ವಳಂಬ್ರ, ಪ್ರಶಾಂತ್ ಮಚ್ಚಿನ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ವಿ. ಶ್ರೀನಿವಾಸ್, ಮ್ಯಾನೇಜರ್ ರಾಮಕೃಷ್ಣ ಶಬರಾಯ, ಸೌತಡ್ಕ ಸಂರಕ್ಷಣಾ ಸಮಿತಿ ಅಧ್ಯಕ್ಷ ಪ್ರಶಾಂತ ರೈ ಅರಂತಬೈಲು, ದಯಾನೀಶ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.