ಎಸ್.ಸಿ.ಎಸ್. ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

0

ಪುತ್ತೂರು: ಎಸ್.ಸಿ.ಎಸ್ ಆಸ್ಪತ್ರೆ ಮಂಗಳೂರು ಹಾಗೂ ಭಾರತೀಯ ರೆಡ್‌ ಕ್ರಾಸ್ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲೆ ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಜೂ. 28ರಂದು ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು. ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಜೀವರಾಜ್ ಸೊರಕೆ ದೀಪ ಬೆಳಗಿಸಿ ಉದ್ಘಾಟಿಸುವುದರ ಮೂಲಕ ಚಾಲನೆ ನೀಡಿದರು.

ಮಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅಗತ್ಯವಿರುವ ರಕ್ತವನ್ನು ಪೂರೈಸುವ ಸದುದ್ದೇಶದಿಂದ ಈ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಆಸ್ಪತ್ರೆಯ ಸಿಬ್ಬಂದಿ, ಜಿಲ್ಲೆಯ ಆರಕ್ಷಕ ಸಿಬ್ಬಂದಿ ಸೇರಿ ಹಲವಾರು ಸ್ವಯಂಸೇವಕರು ಶಿಬಿರದಲ್ಲಿ ರಕ್ತದಾನ ಮಾಡಿದರು.

ರಕ್ತದಾನಿಗಳಿಂದ ಸಂಗ್ರಹಿಸಲಾದ ರಕ್ತವನ್ನು ರಕ್ತನಿಧಿ ಘಟಕಗಳು, ತುರ್ತು ಚಿಕಿತ್ಸೆ, ಶಸ್ತ್ರಚಿಕಿತ್ಸೆ ಹಾಗೂ ವಿವಿಧ ರೋಗಗಳಲ್ಲಿ ಬಳಲುತ್ತಿರುವ ಅನೇಕ ರೋಗಿಗಳ ಆರೋಗ್ಯ ಸಮಸ್ಯೆಗಳ ಸಂದರ್ಭಗಳಲ್ಲಿ ತುರ್ತು ಸಹಾಯಹಸ್ತವನ್ನು ನೀಡುವುದರ ಮೂಲಕ ಸಹಕಾರಿಯಾಗಲಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಜೀವರಾಜ್ ಸೊರಕೆ ತಿಳಿಸಿದರು.

ಆಸ್ಪತ್ರೆಯ ವತಿಯಿಂದ ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸುವಲ್ಲಿ ಸಹಕರಿಸಿದವರಿಗೆ ಧನ್ಯವಾದ ಸಲ್ಲಿಸಿದರು.

LEAVE A REPLY

Please enter your comment!
Please enter your name here