ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಸ್ವಯಂ ಸೇವಕರ ತರಬೇತಿ, ವಾರ್ಷಿಕ ಸಭೆ

0

ಪುತ್ತೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಸ್ವಯಂ ಸೇವಕರ ತರಬೇತಿ ಮತ್ತು ವಾರ್ಷಿಕ ಸಭೆಯು ಜು.1ರಂದು ಧರ್ಮಸ್ಥಳ ಕಟ್ಟಡದ ಯೋಜನಾ ಕಚೇರಿ ಸಭಾ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ನಗರ ಠಾಣಾ ಎಸ್.ಐ ಆಂಜನೇಯ ರೆಡ್ಡಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಿನಿ ಸರಕಾರದಂತೆ ಎಲ್ಲಾ ರಂಗದಲ್ಲಿಯೂ ಕಾರ್ಯನಿರ್ವಹಿಸುತ್ತಿದೆ. ದಕ್ಷ, ಕೃಷಿ, ಶೈಕ್ಷಣಿಕ, ಆರ್ಥಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಪ್ರಾಮಾಣಿಕತೆಯಿಂದ ಸಮಾಜದಲ್ಲಿ ಸೇವೆ ನೀಡುತ್ತಿದೆ. ಸಮಾಜದ ಅಭಿವೃದ್ಧಿಗಾಗಿ ಹೊಸ, ಹೊಸ ಯೊಜನೆಗಳನ್ನು ಕೈಗೆತ್ತಿಕೊಳ್ಳುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ವಿಶ್ವ ಖ್ಯಾತಿಯ ನೋಬೆಲ್ ಪ್ರಶಸ್ತಿ ಪಡೆಯುವ ಅರ್ಹತೆ ಪಡೆದಿದೆ ಎಂದರು.


ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಮಾತನಾಡಿ, ಸಮಾಜದ ಸಮಸ್ಯೆಗಳಿಗೆ ಪರಿಹಾರವಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹುಟ್ಟಿಕೊಂಡಿದೆ. ಶೌರ್ಯ ತಂಡದವರು ಅಪತ್ಪಾಂದವರು, ಜನ ಸೇವೆಯ ಅವಕಾಶ ಶೌರ್ಯ ತಂಡದವರಿಗೆ ದೊರೆತಿದ್ದು, ಅದನ್ನು ಸದ್ಬಳಕೆ ಮಾಡಬೇಕು. ಪೂರ್ವ ತಯಾರಿ ಮಾಡಿಕೊಂಡು ತುರ್ತು ಸೇವೆಯಲ್ಲಿ ತೊಡಗಿಸಿಕೊಳ್ಳವಂತೆ ತಿಳಿಸಿದರು.


ಯೋಜನೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಎಲ್ಲಾ ಘಟಕಗಳ ಸಭೆ ನಡೆಸಲಾಗುತ್ತಿದೆ. ಈ ಹಿಂದೆ ಐದು ವರ್ಷ ಸೇವೆ ಸಲ್ಲಿಸಿದವರನ್ನು ಸೇರಿಸಿದಕೊಂಡು ತುರ್ತು ಸ್ಪಂದನಾ ಘಟಕ ಸ್ಥಾಪಿಸಲಾಗುವುದು. ಘಟಕಗಳಲ್ಲಿ ಸೇವೆಯ ಗುಣಮಟ್ಟ ಮುಖ್ಯವಾಗಿದೆ. ತರಬೇತಿಯಲ್ಲಿ ಭಾಗವಹಿಸಿ ಜ್ಞಾನ ವೃದ್ಧಿಸಿಕೊಂಡು ಬದ್ಧತೆಯಿಂದ ಕೆಲಸ ಮಾಡಲು ಸಹಕಾರಿಯಾಗಲಿದೆ ಎಂದರು.


ಎನ್‌ಡಿಆರ್‌ಎಫ್‌ನ ಟೀಮ್ ಕಮಾಂಡರ್ ಶಾಂತಿಲಾಲ್ ಜಟ್ಟಿಯಾಲ್, ಜನಜಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ತಾಲೂಕು ಅಧ್ಯಕ್ಷ ಯು.ಲೋಕೇಶ್ ಹೆಗ್ಡೆ, ಶೌರ್ಯ ವಿಪತ್ತು ತಂಡದ ಕ್ಯಾಪ್ಟನ್ ಮನೋಜ್ ಹಾಗೂ ಮಾಸ್ಟರ್ ಸುರೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ತಾಲೂಕು ಯೋಜನಾಧಿಕಾರಿ ಶಶಿಧರ್ ಸ್ವಾಗತಿಸಿದರು.
ಅರ್ಪಿತ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಅರಿಯಡ್ಕ ವಲಯ ಮೇಲ್ವಿಚಾರಕ ಹರೀಶ್ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ನಡೆದ ತರಬೇತಿಯಲ್ಲಿ ಎನ್‌ಡಿಆರ್‌ಎಫ್‌ನ ಟೀಮ್ ಕಮಾಂಡರ್ ಶಾಂತಿಲಾಲ್ ಜಟ್ಟಿಯಾಲ್ ಹಾಗೂ ವಿನೋದ್ ಶೌರ್ಯ ವಿಪತ್ತು ತಂಡದವರಿಗೆ ತರಬೇತಿ ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here