ವಿಟ್ಲ : ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 2024-25 ನೇ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶವನ್ನು ದಾಖಲಿಸಿದ ಎಲ್ಲಾ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮವು ಮಾಣಿ ಬಾಲವಿಕಾಸ ಆಡಿಟೋರಿಯಂ ನಲ್ಲಿ ನಡೆಯಿತು.

ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ್ ಶೆಟ್ಟಿ ಜೆ. ಅಧ್ಯಕ್ಷತೆ ವಹಿಸಿದ್ದರು. ಪುತ್ತೂರಿನ ಸುದಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಪ್ರೀತ್ ಕೆ.ಸಿರವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.
ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಸ್ವಸ್ತಿ ಎಸ್ ಭಟ್, ವೈಷ್ಣವಿ ಹಾಗೂ ಮೊಹಮ್ಮದ್ ತಜೀಮ್ ಇಕ್ಬಾಲ್ ರವರನ್ನು ಪೋಷಕರೊಂದಿಗೆ ಸನ್ಮಾನಿಸಲಾಯಿತು. ವಿಶಿಷ್ಟ ಶ್ರೇಣಿಯಲ್ಲಿ ಮತ್ತು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಗೊಂಡ ಎಲ್ಲಾ ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ವೇದಿಕೆಯಲ್ಲಿ ಉಪಸ್ಥಿತರಿದ್ದ ಬಾಲವಿಕಾಸ ಟ್ರಸ್ಟಿನ ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ. ಮತ್ತು ಶಾಲೆಯ ರಕ್ಷಕ- ಶಿಕ್ಷಕ ಸಂಘದ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸುಪ್ರಿಯಾ ಡಿ. ಸ್ವಾಗತಿಸಿ, ಸಹಶಿಕ್ಷಕಿ ರಶ್ಮಿ ಕೆ ಫೆರ್ನಾಂಡಿಸ್ ವಂದಿಸಿದರು. ಹತ್ತನೇ ತರಗತಿಯ ವಿದ್ಯಾರ್ಥಿನಿಯರಾದ ಆಯಿಷಾ ದಾನಿಯಾ ಮತ್ತು ಅಂಶಿಕ ಕಾರ್ಯಕ್ರಮ ನಿರೂಪಿಸಿದರು.