
ಪುತ್ತೂರು: ಬೆಳಿಯೂರುಕಟ್ಟೆ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸಿ, ನಿವೃತ್ತರಾದ ಪ್ಲೇವಿ ಡಿ’ಸೋಜಾ’ ಇವರ ವಿದಾಯ ಸಮಾರಂಭವು ಜೂ.30ರಂದು ಕಾಲೇಜಿನ ಸಭಾಂಗಣದಲ್ಲಿ ಜರಗಿತು.
ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಎ.ಎಂ ಪ್ರಕಾಶ್‌ಚಂದ್ರ ಆಳ್ವ ನಿವೃತ್ತರನ್ನು ಸನ್ಮಾನಿಸಿದರು. ಕಾಲೇಜಿನ ಪ್ರಾಂಶುಪಾಲ ಹರಿಪ್ರಕಾಶ್ ಬೈಲಾಡಿ ಅಧ್ಯಕ್ಷತೆ ವಹಿಸಿದ್ದರು.
ಸನ್ಮಾನ ಸ್ವೀಕರಿಸಿದ ಪ್ಲೇವಿ ಡಿ ಸೋಜ ತಮ್ಮ ಸುದೀರ್ಘ ಸೇವೆಯ ಅನುಭವವನ್ನು ಮೆಲುಕು ಹಾಕಿದರು. ಮುಖ್ಯೋಪಾಧ್ಯಾಯಿನಿ ಸುನೀತಾ, ಅರ್ಥಶಾಸ್ತ್ರ ಉಪನ್ಯಾಸಕಿ ರವಿಕಲಾ, ಹಾಗೂ ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕಿ ಸಜಿಲಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ಹರಿಪ್ರಕಾಶ್ ಬೈಲಾಡಿ ಸ್ವಾಗತಿಸಿದರು. ಆಂಗ್ಲ ಉಪನ್ಯಾಸಕಕಿ ನಮಿತಾ ಇವರು ವಂದಿಸಿದರು. ಕನ್ನಡ ಉಪನ್ಯಾಸಕಿ ಶಶಿಕಲಾ ಸನ್ಮಾನ ಪತ್ರ ವಾಚಿಸಿದರು. ದ್ವಿತೀಯ ಪಿಯುಸಿಯ ಶ್ರೀಕೃಪಾ ಮತ್ತು ನಿಕ್ಷಿತಾ ಪ್ರಾರ್ಥಿಸಿದರು. ಇತಿಹಾಸ ಉಪನ್ಯಾಸಕಿ ಇಂದಿರಾ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ಬೋಧಕ ಬೋಧಕೇತರ ವೃಂದ, ವಿದ್ಯಾರ್ಥಿ ವೃಂದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಕೇಂದ್ರ ಬಿಂದುವಾದ ಪ್ಲೇವಿ ಡಿ ಸೋಜ ಇವರನ್ನು ಶಾಲು ಹೊದಿಸಿ, ಫಲ ಪುಷ್ಪ, ಸ್ಮರಣೆಕೆ,ಸನ್ಮಾನ ಪತ್ರವನ್ನು ನೀಡಿ ಗೌರವಿಸಲಾಯಿತು.