ಕಾರಿನಲ್ಲಿ ಅಕ್ರಮ ಮದ್ಯ ಸಾಗಾಟ ಪ್ರಕರಣದ ಆರೋಪಿ ದೋಷಮುಕ್ತ

0

ಪುತ್ತೂರು:ಕಾರಿನಲ್ಲಿ ಅಕ್ರಮ ಮದ್ಯ ಸಾಗಾಟ ಪ್ರಕರಣದ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉzಶದಿಂದ 2023ರ ಮಾ.15ರಂದು ರಾತ್ರಿ ಯಾವುದೇ ದಾಖಲಾತಿಗಳಿಲ್ಲದೆ ಮಾರುತಿ ಸ್ವಿಫ್ಟ್ ಕಾರ್‌ನಲ್ಲಿ ಅಕ್ರಮವಾಗಿ ಮದ್ಯದ ಸ್ಯಾಚೆಟ್ ಮತ್ತು ಪ್ಲಾಸ್ಟಿಕ್ ಬಾಟಲಿಗಳನ್ನು ಸಾಗಾಟ ಮಾಡುತ್ತಿದ್ದುದ್ದನ್ನು ಕಡಂಬು ಎಂಬಲ್ಲಿ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ ಪತ್ತೆ ಮಾಡಿದ್ದರು.

ಆರೋಪಿ ಪ್ರತಾಪ್ ಶೆಟ್ಟಿ ಎಂಬಾತನ ವಶದಲ್ಲಿದ್ದ ಒಟ್ಟು 106.83ಲೀಟರ್ ಮದ್ಯವನ್ನು ವಾಹನ ಸಮೇತ ವಶಪಡಿಸಿಕೊಂಡು ಕರ್ನಾಟಕ ಅಬಕಾರಿ ಕಾಯ್ದೆ ಕಾಲಂ 32,34,43(ಎ)ರಡಿಯಲ್ಲಿ ಪ್ರಥಮ ವರ್ತಮಾನವನ್ನು ದಾಖಲಿಸಿ ಪೂರ್ಣ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರಿನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಯೋಗೀಂದ್ರ ಶೆಟ್ಟಿಯವರು ಆರೋಪಿಯನ್ನು ದೋಷಮುಕ್ತ ಎಂದು ತೀರ್ಪು ನೀಡಿದ್ದಾರೆ.ಆರೋಪಿಯ ಪರ ವಕೀಲರಾದ ಮಹೇಶ್ ಕಜೆ ಅವರು ವಾದಿಸಿದ್ದರು.

LEAVE A REPLY

Please enter your comment!
Please enter your name here