ನೆಲ್ಯಾಡಿ: ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ನೆಲ್ಯಾಡಿ ಲೀಜನ್‌ನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್‌ನ ಇದರ ರಾಷ್ಟ್ರೀಯ ಅಧ್ಯಕ್ಷ ಜಯೇಶ್ ಸಮಾರಂಭ ಉದ್ಘಾಟಿಸಿದರು. ನೆಲ್ಯಾಡಿ ಲೀಜನ್ ಅಧ್ಯಕ್ಷ ಶೀನಪ್ಪ ಎಸ್. ಅಧ್ಯಕ್ಷತೆ ವಹಿಸಿದ್ದರು. ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ರಾಷ್ಟ್ರೀಯ ಉಪಾಧ್ಯಕ್ಷ ಸಿದ್ದಗಂಗಯ್ಯ, ಜ್ಞಾನೋದಯ ಬೆಥನಿ ಪ.ಪೂ.ಕಾಲೇಜು ಪ್ರಾಂಶುಪಾಲ ಫಾ.ಡಾ|ವರ್ಗೀಸ್ ಕೈಪನಡ್ಕ, ಸಂಚಾಲಕ ಫಾ.ಜೇಸನ್ ಸೈಮನ್, ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್‌ನ ಪೂರ್ವ ರಾಷ್ಟ್ರೀಯ ಅಧ್ಯಕ್ಷ ಡಾ.ಕೇದಿಗೆ ಅರವಿಂದ ರಾವ್, ರಾಷ್ಟ್ರೀಯ ಸಂಯೋಜಕ ಡಾ.ಸದಾನಂದ ಕುಂದರ್, ನೆಲ್ಯಾಡಿ ಲೀಜನ್ ಸ್ಥಾಪಕ ಅಧ್ಯಕ್ಷ ಅಬ್ರಹಾಂ ವರ್ಗೀಸ್, ಪೂರ್ವಾಧ್ಯಕ್ಷ ನಾರಾಯಣ ಎನ್ ಬಲ್ಯ, ನೆಲ್ಯಾಡಿ ಜೇಸಿಐ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ, ಬೆಥನಿ ಐಟಿಐ ಪ್ರಾಂಶುಪಾಲ ಸಜಿ ಕೆ ತೋಮಸ್, ಕೌಕ್ರಾಡಿ ಗ್ರಾ.ಪಂ.ಅಧ್ಯಕ್ಷ ಉದಯಕುಮಾರ್, ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ನೆಲ್ಯಾಡಿ ಲೀಜನ್ ಕಾರ್ಯದರ್ಶಿ ಮೋಹನ್ ಕುಮಾರ್ ಡಿ, ಕೋಶಾಧಿಕಾರಿ ಪ್ರಕಾಶ್ ಕೆ ವೈ ಉಪಸ್ಥಿತರಿದ್ದರು.

ಅಧಿಕಾರ ಸ್ವೀಕಾರ:
2025-26ನೇ ಸಾಲಿನ ನೂತನ ಅಧ್ಯಕ್ಷ ಪ್ರಕಾಶ್ ಕೆ.ವೈ., ಕಾರ್ಯದರ್ಶಿ ಉಲಹನ್ನನ್ ಪಿ.ಎಮ್ ಮತ್ತು ಕೋಶಾಧಿಕಾರಿ ಮೋಹನ್ ಕುಮಾರ್ ಡಿ., ಪ್ರಮಾಣ ವಚನ ಸ್ವೀಕರಿಸಿದರು. ನೂತನ ಅಧ್ಯಕ್ಷ ಪ್ರಕಾಶ್ ಕೆ.ವೈ.ಅವರು ಮಾತನಾಡಿ, ಸಂಸ್ಥೆಯ ಬೆಳವಣಿಗೆಗೆ ಎಲ್ಲರ ಸಹಕಾರ ಕೋರಿದರು.
ಸನ್ಮಾನ:
ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ಇದರ ರಾಷ್ಟ್ರೀಯ ಅಧ್ಯಕ್ಷ ಜಯೇಶ್, ಉಪಾಧ್ಯಕ್ಷ ಸಿದ್ದಗಂಗಯ್ಯ, ನೆಲ್ಯಾಡಿ ಲೀಜನ್ ಅಧ್ಯಕ್ಷ ಶೀನಪ್ಪ ಎಸ್., ಜ್ಞಾನೋದಯ ಬೆಥನಿ ಪ.ಪೂ.ಕಾಲೇಜು ಪ್ರಾಂಶುಪಾಲ ಫಾ.ಡಾ|ವರ್ಗೀಸ್ ಕೈಪನಡ್ಕ, ಸಂಚಾಲಕ ಫಾ.ಜೇಸನ್ ಸೈಮನ್ ಅವರನ್ನು ಸನ್ಮಾನಿಸಲಾಯಿತು. ರವೀಂದ್ರ ಟಿ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ನೂತನ ಕಾರ್ಯದರ್ಶಿ ಉಲಹನ್ನನ್ ವಂದಿಸಿದರು.