
ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ವಿನೂತನ ರೀತಿಯಲ್ಲಿ ಆಚರಿಸಲಾಯಿತು.
ಮನುಕುಲದ ಆರೋಗ್ಯಕ್ಕಾಗಿ ಮನಪೂರ್ವಕ ಸೇವೆಗೈವ ಮಹಾತ್ಮರೆನಿಸಿದ ವೈದ್ಯರಿಗೆ ತಮ್ಮ ಪ್ರೀತಿ ಹಾಗೂ ಗೌರವವನ್ನು ವ್ಯಕ್ತ ಪಡಿಸುವ ನಿಟ್ಟಿನಲ್ಲಿ, ಕಾಲೇಜು ಪ್ರಾಂಶುಪಾಲರ ಹಾಗೂ ಉಪನ್ಯಾಸಕರುಗಳ ಮಾರ್ಗದರ್ಶನದಲ್ಲಿ ಪುತ್ತೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಆಸ್ಪತ್ರೆಗಳಿಗೆ ಕಾಲೇಜಿನ ವಿದ್ಯಾರ್ಥಿ ಸಂಘದ ಪ್ರತಿನಿಧಿಗಳು ಭೇಟಿ ನೀಡಿ ಶುಭಾಶಯ ಪತ್ರದ ಜೊತೆಗೆ ಸಿಹಿತಿಂಡಿ ವಿತರಿಸಿ ಸಂಭ್ರಮಿಸಿದರು.