ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನ್ನಛತ್ರದ ಸಭಾಂಗಣದಲ್ಲಿ ಸಂಜೆ ೫ಕ್ಕೆ ಪುತ್ತೂರು ದೇವಾಲಯ ಸಂವರ್ಧನಾ ಸಮಿತಿಯಿಂದ ಶ್ರೀ ಸರಸ್ವತಿ ವಂದನೆ ಕಾರ್ಯಕ್ರಮದ ಪೂರ್ವಭಾವಿ ಸಭೆ
ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಬೆಳಿಗ್ಗೆ ೧೦.೩೦ಕ್ಕೆ ನವೀಕೃತ ಉರಿಮಜಲು ಕೆ. ರಾಮ್ ಭಟ್ ಸಭಾಂಗಣದ ಲೋಕಾರ್ಪಣೆ
ಪುತ್ತೂರು ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಕಲಾ ಮಂದಿರದಲ್ಲಿ ಸಂಜೆ ೪ರಿಂದ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ ವತಿಯಿಂದ ಯಕ್ಷಗಾನ ತಾಳಮದ್ದಳೆ-ದಕ್ಷಾಧ್ವರ
ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಕೇಂದ್ರ ಕಚೇರಿಯ ಸಂಗಮ ಕೃಪಾ ಸಭಾಭವನದಲ್ಲಿ ಸಂಜೆ ೫.೩೦ರಿಂದ ಯೋಗ ತರಬೇತಿ ಶಿಬಿರ
ಸುಳ್ಯಪದವು ಸರ್ವೋದಯ ವಿದ್ಯಾಸಂಸ್ಥೆಯ ಸಭಾಭವನದಲ್ಲಿ ಬೆಳಿಗ್ಗೆ ೧೦ಕ್ಕೆ ಮಧುವನ `ಸಿಂಚನ-೨೦೨೫’ ಕಾರ್ಯಕ್ರಮ
ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಬೆಳಿಗ್ಗೆ ೬ರಿಂದ ಗಣಪತಿ ಹೋಮ, ಭಜನಾ ಸಂಕೀರ್ತನೆ, ೭ರಿಂದ ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ವಾಯನ ದಾನ, ಶ್ರೀಗುರು ಪೂಜೆ, ಬಾಲಭೋಜನ, ಶ್ರೀ ನಾಗದೇವರಿಗೆ ಕ್ಷೀರಾಭಿಷೇಕ, ಗೋಮಾತಾ ಪೂಜೆ, ೧೧.೩೦ಕ್ಕೆ ಸಾಮೂಹಿಕ ಕುಂಕುಮಾರ್ಚನೆ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ೬.೩೦ರಿಂದ ಶ್ರೀ ಲಕ್ಷ್ಮೀಪೂಜೆ, ಮಹಾಪೂಜೆ
ಶುಭಾರಂಭ
ಪುತ್ತೂರು ಕಎಸ್ಆರ್ಟಿಸಿ ಬಸ್ ನಿಲ್ದಾಣದ ಕಮರ್ಷಿಯಲ್ ಕಾಂಪ್ಲೆಕ್ಸ್ನಲ್ಲಿ ಬೆಳಿಗ್ಗೆ ೧೦ಕ್ಕೆ ತಾಸ್ಮಿ ಹೇರ್ ಸ್ಟುಡಿಯೋ ಮೆನ್ಸ್ ಸಲೂನ್ ಶುಭಾರಂಭ