ಉಪ್ಪಿನಂಗಡಿ: ಹೆದ್ದಾರಿ ಮಧ್ಯದ ಡಿವೈಡರ್‌ಗೆ ಡಿಕ್ಕಿಯಾಗಿ ಒಮ್ನಿ ಕಾರೊಂದು ಪಲ್ಟಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಜು.2ರಂದು ಸಂಜೆ ನಡೆದಿದೆ.

ಸಕಲೇಶಪುರ ಮೂಲದ ದಂಪತಿ ಹಾಗೂ ಪುಟ್ಟ ಮಗುವಿನೊಂದಿಗೆ ಮಂಗಳೂರಿನ ಆಸ್ಪತ್ರೆಗೆ ಹೋದವರು ಮತ್ತೆ ಸಕಲೇಶಪುರಕ್ಕೆ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಭಾರೀ ಮಳೆಗೆ ಚರಂಡಿ ನೀರು ರಸ್ತೆಗೆ ಹರಿದುಬಂದಿದ್ದು ವೇಗವಾಗಿ ಬಂದ ಒಮ್ನಿ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಮಧ್ಯೆ ಇರುವ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ ಎಂದು ವರದಿಯಾಗಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ರೇಖಾ(38 )ಎಂಬವರಿಗೆ ಸಣ್ಣಪುಟ್ಟ ಗಾಯವಾಗಿದ್ದು ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಚಾಲಕ ಹಾಗೂ ಮಗು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.