ವಂಚನೆಗೊಳಗಾದ ಯುವತಿ ಮನೆಗೆ ಮಹಿಳಾ ಸಂಘಟನೆಗಳ ನಿಯೋಗ ಭೇಟಿ

0

ಪುತ್ತೂರು: ಪ್ರೇಮ ವಂಚನೆಗೆ ಒಳಗಾದ ವಿದ್ಯಾರ್ಥಿನಿ ಮನೆಗೆ ಜನವಾದಿ ಮಹಿಳಾ ಸಂಘಟನೆ, ಸಾಮರಸ್ಯ ಮಂಗಳೂರು ಸಹಿತ ವಿವಿಧ ಮಹಿಳಾ ಸಂಘಟನೆಗಳ ಪ್ರಮುಖರು ಭೇಟಿ ನೀಡಿ ಧೈರ್ಯ ತುಂಬಿದರು.

ಮದುವೆಯಾಗುವ ಭರವಸೆ ನೀಡಿ, ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ನಂತರ ರಾಜಕೀಯ ಬೆಂಬಲದಿಂದ ತಲೆ ಮರೆಸಿಕೊಂಡಿರುವ ಕೃಷ್ಣರಾವ್‌ ನನ್ನು ತಕ್ಷಣ ಬಂಧಿಸಬೇಕು. ಗರ್ಭಪಾತಕ್ಕೆ ಒತ್ತಾಯಿಸಿ ಹಣದ ಆಮಿಷ ಒಡ್ಡಿದ ಸಂಘಟನೆಗಳ ಪ್ರಮುಖರನ್ನು ತನಿಖೆಗೆ ಒಳಪಡಿಸಬೇಕು ಎಂದು ಮಹಿಳಾ ನಾಯಕರು ಈ ಸಂದರ್ಭ ಆಗ್ರಹಿಸಿದರು.ಈ ಕುರಿತು ನ್ಯಾಯ ಒದಗಿಸದಿದ್ದಲ್ಲಿ ಜಿಲ್ಲೆಯ ಜನಪರ ಮಹಿಳಾ ಸಂಘಟನೆಗಳನ್ನು ಜೊತೆ ಸೇರಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ನಿಯೋಗ ಎಚ್ಚರಿಕೆ ನೀಡಿದೆ.

ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ ಮಾಜಿ ಕಾರ್ಪೊರೇಟರ್ ಜಯಂತಿ ಶೆಟ್ಟಿ, ಸಾಮರಸ್ಯ ಮಂಗಳೂರಿನ ಮಂಜುಳಾ ನಾಯಕ್, ದಲಿತ ಹಕ್ಕುಗಳ ಸಮಿತಿಯ ಈಶ್ವರಿ ಪದ್ದುಂಜ. ನ್ಯಾಯವಾದಿ ಶೈಲಜಾ ಅಮರನಾಥ್, ಜನವಾದಿ ಮಹಿಳಾ ಸಂಘಟನೆಯ ಪ್ರಮೀಳಾ ಕಾವೂರು, ಅಸುಂತಾ ಡಿ’ಸೋಜ, ಪ್ರಮೀಳಾ ದೇವಾಡಿಗ, ಪ್ಲೇವಿ ಕ್ರಾಸ್ತಾ ನಿಯೋಗದಲ್ಲಿದ್ದರು.

LEAVE A REPLY

Please enter your comment!
Please enter your name here