ಪುತ್ತೂರು: ರಾಷ್ಟ್ರಮಟ್ಟದ ಪರೀಕ್ಷೆಯಾದ Joint Admission Test For Masters(JAM) ನಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ವೈಭವಿ ಶೆಟ್ಟಿ ರಾಷ್ಟ್ರ ಮಟ್ಟದಲ್ಲಿ 147ನೇ ರಾಂಕ್ ಹಾಗೂ ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆದು ಉತ್ತಮ ಸಾಧನೆ ಮಾಡಿರುತ್ತಾರೆ. ಈ ಮೂಲಕ ಬೆಂಗಳೂರಿನಲ್ಲಿರುವ ಭಾರತದ ಶ್ರೇಷ್ಠ ಸಂಶೋಧನಾ ಹಾಗೂ ಉನ್ನತ ಶಿಕ್ಷಣ ಸಂಸ್ಥೆಯಾದ ಐಐಎಸ್ಸಿ ಯಲ್ಲಿ ಎಂ.ಎಸ್ಸಿ, ಪಿ.ಎಚ್.ಡಿ ತರಬೇತಿ ಪಡೆಯಲು ಆಯ್ಕೆಯಾಗಿರುತ್ತಾರೆ.
ಇವರನ್ನು ಕಾಲೇಜಿನ ವತಿಯಿಂದ ಪ್ರಾಂಶುಪಾಲರಾದ ದೇವಿಚರಣ್ ರೈ ಎಂ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿನಿಯ ಪೋಷಕರು ಉಪಸ್ಥಿತರಿದ್ದು ವಿದ್ಯಾರ್ಥಿನಿಗೆ ಶುಭ ಹಾರೈಸಿದರು.