ಪುತ್ತೂರು:ಸಾಮೆತ್ತಡ್ಕದಲ್ಲಿ ಕಟ್ಟಡವೊಂದರಲ್ಲಿ ಅಕ್ರಮ ವೇಶ್ಯಾವಾಟಿಕೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿಗಳಿಬ್ಬರಿಗೆ ಪುತ್ತೂರು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ವಿಲ್ಪ್ರೆಡ್ ಎಂಬವರು ವಾಸ್ತವ್ಯದ ಮನೆಯ ಸಮೀಪದ ಕಟ್ಟಡದಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿರುವ ಮಾಹಿತಿಯಾಧರಿಸಿ ಜು.1ರಂದು ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿದ್ದರು. ಅಲ್ಲಿದ್ದ ಮಹಿಳೆಯನ್ನು ರಕ್ಷಣೆ ಮಾಡಿ ಆರೋಪಿಗಳಾದ ವಿಲ್ಪ್ರೆಡ್ ಡಿ’ಸೋಜ (58ವ) ಮತ್ತು ಸುಳ್ಯ ಮೂಲದ ಲಕ್ಷ್ಮೀಶ(39ವ) ಎಂಬವರನ್ನು ಬಂಧಿಸಿದ್ದರು. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.