ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪ್ರೊ.ಜಿ.ಆರ್.ರೈ ರವರಿಗೆ ಶ್ರದ್ದಾಂಜಲಿ ಸಭೆ

0

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸ್ಥಾಪಕ ಪ್ರಾಂಶುಪಾಲರಾಗಿ ಕಾಲೇಜಿಗೆ ಭದ್ರ ಬುನಾದಿಯನ್ನು ಹಾಕಿಕೊಟ್ಟ ಪ್ರೊ.ಜಿ.ಆರ್.ರೈ ಅವರು ಇಂದು ವಿಧಿವಶರಾಗಿದ್ದು, ಅವರಿಗೆ ಭಾವ ಪೂರ್ಣ ಶ್ರದ್ದಾಂಜಲಿಯನ್ನು ಸಮರ್ಪಿಸಲಾಯಿತು.

ನುಡಿ ನಮನವನ್ನು ಸಲ್ಲಿಸಿದ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಮಾತನಾಡಿ ಸಿವಿಲ್ ಇಂಜಿನಿಯರ್ ಆಗಿದ್ದ ಫ್ರೊ.ಜಿ.ಆರ್.ರೈ ಅವರು ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆಯಲ್ಲಿ ಸಲ್ಲಿಸುತ್ತಾ ಅದರ ಅಭಿವೃದ್ಧಿಗೆ ಶ್ರಮಿಸಿದವರು. ದಿ.ಉರಿಮಜಲು ರಾಮ ಭಟ್ ಅವರ ಬಾಲ್ಯ ಸ್ನೇಹಿತನಾಗಿದ್ದು, ಅವರ ಒತ್ತಾಸೆಯ ಮೇರೆಗೆ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪ್ರಾರಂಭಕ್ಕೆ ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿ ಅದರ ಸ್ಥಾಪಕ ಪ್ರಾಂಶುಪಾಲರಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ಅಗಲಿದ ಮಹಾನ್ ಚೇತನಕ್ಕೆ ವಿಷ್ಣು ಸಾಯುಜ್ಯ ಪ್ರಾಪ್ತಿಯಾಗಲಿ ಎಂದರು.
ಈ ಸಂದರ್ಭದಲ್ಲಿ ಮೌನ ಪ್ರಾರ್ಥನೆಯನ್ನು ನಡೆಸಲಾಯಿತು.
ಕಾಲೇಜಿನ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದು ಪುಷ್ಪ ನಮನ ಸಲ್ಲಿಸಿದರು.

LEAVE A REPLY

Please enter your comment!
Please enter your name here