ಪುತ್ತೂರು: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಗ್ರಾಮ ಪಂಚಾಯತ್ ಪೆರಾಬೆ ಹಾಗೂ ವಿಕಾಸ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ, ಪೆರಾಬೆ ಇದರ ಜಂಟಿ ಆಶ್ರಯದಲ್ಲಿ ಎರಡು ತಿಂಗಳ ಹೊಲಿಗೆ ತರಬೇತಿಯನ್ನು ಉದ್ಘಾಟಿಸಲಾಯಿತು.
ಮಂಗಳೂರು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಯೋತಿ ರಾಜ್ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಮಹಿಳೆಯರಿಗೆ ಸ್ವ-ಉದ್ಯೋಗಕ್ಕೆ ಶುಭ ಹಾರೈಸಿ, ಬ್ಯಾಂಕ್ ನಿಂದ ಸಿಗುವ ಸಾಲ ಸೌಲಭ್ಯಗಳಿಂದ ಮಹಿಳೆಯರು ಪ್ರಯೋಜನ ಪಡೆಯಿರಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೆರಾಬೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಂಧ್ಯಾ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಭಾರತೀಯ ವಿಕಾಸ ಟ್ರಸ್ಟ್ ನ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ ಮಾತನಾಡಿ, ಸ್ವ-ಉದ್ಯೋಗದ ನಿಯಮಗಳು, ಸ್ವ-ಉದ್ಯೋಗಕ್ಕೆ ಸಿಗುವ ಬ್ಯಾಂಕ್ ಸೌಲಭ್ಯಗಳು ಹಾಗೂ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಾಲಿನಿ , ಗ್ರಾಮ ಪಂಚಾಯತ್ ಮಟ್ಟದ ವಿಕಾಸ ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಸಂಧ್ಯಾ, ತಾಲೂಕು ಅಭಿಯಾನ ನಿರ್ವಹಣೆ ಘಟಕದ ತಾಲೂಕು ವ್ಯವಸ್ಥಾಪಕಿ ಕೃಷಿಯೇತರ ಚಟುವಟಿಕೆಯ ನಳಿನಾಕ್ಷಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಂಪನ್ಮೂಲ ವ್ಯಕ್ತಿ ಲಿಖಿತ ಸ್ವಾಗತಿಸಿದರು.ಪಶುಸಖಿ ಗೀತಾ ವಂದಿಸಿದರು. ಮುಖ್ಯ ಪುಸ್ತಕ ಬರಹಗಾರ್ತಿ ಮಾಲತಿ ಕಾರ್ಯಕ್ರಮ ನಿರೂಪಣೆ ಮಾಡಿದರು.