ಪುತ್ತೂರು: ಅನುಮತಿ ಪಡೆಯದೆ ಪ್ರತಿಭಟನೆ – ಎಸ್.ಡಿ.ಪಿ.ಐ ಮುಖಂಡರ ಸಹಿತ 30 ಮಂದಿ ವಿರುದ್ಧ ಪ್ರಕರಣ ದಾಖಲು

0

ಪುತ್ತೂರು: ಕಿಲ್ಲೆ ಮೈದಾನದ ಬಳಿ ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಅಕ್ರಮವಾಗಿ ಗುಂಪು ಸೇರಿ ಧ್ವನಿವರ್ಧಕ ಬಳಸಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹಾಗೂ ಇತರರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜು.2 ರಂದು ಸಂಜೆ ಪುತ್ತೂರು ಕಿಲ್ಲೆ ಮೈದಾನದ ಬಳಿ ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ವತಿಯಿಂದ ಅಧ್ಯಕ್ಷ ಅಶ್ರಫ್ ಬಾವು ಹಾಗೂ ಇತರೆ ಸುಮಾರು 30 ಜನರು ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೇ, ಅಕ್ರಮ ಗುಂಪು ಸೇರಿ, ಧ್ವನಿವರ್ಧಕವನ್ನು ಬಳಸಿ ಪ್ರತಿಭಟನೆ ನಡೆಸಿರುವುದು ಕಂಡುಬಂದಿರುತ್ತದೆ.

ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ 53-2025 ಕಲಂ 189(ಸಿ), ಬಿ.ಎನ್.ಎಸ್ ಮತ್ತು ಕಲಂ 109 ಕರ್ನಾಟಕ ಪೊಲೀಸ್ ಕಾಯ್ದೆ 1963 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

LEAVE A REPLY

Please enter your comment!
Please enter your name here