ಉಪ್ಪಿನಂಗಡಿ: ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ನಾಲ್ವರು ಗಾಯಗೊಂಡ ಘಟನೆ 34 ನೇ ನೆಕ್ಕಿಲಾಡಿ ಗ್ರಾಮದ ಬೊಳ್ಳಾರ್ ಎಂಬಲ್ಲಿ ಜು.3ರಂದು ನಡೆದಿದೆ.
ಲಾರಿ ಕೂಡಾ ಮಂಗಳೂರು ಕಡೆಗೆ ಸಂಚರಿಸುತ್ತಿದ್ದು, ಭಾರೀ ಮಳೆಯ ಕಾರಣ ಎದುರಿನಿಂದ ಸಾಗುತ್ತಿದ್ದ ಲಾರಿ ಕಾಣದೇ ಬಸ್ ಲಾರಿಯ ಹಿಂಬದಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಘಟನೆಯಿಂದ ಬಸ್ ಚಾಲಕ ಧನುಷ್, ಕಂಡೆಕ್ಟರ್ ಷಣ್ಮುಗ, ಪ್ರಯಾಣಿಕರಾದ ಸುಶ್ಮಿತಾ ಮತ್ತು ಪ್ರಥಮ್ ಎಂಬವರು ಗಾಯಗೊಂಡಿದ್ದು, ಗಾಯಾಳುಗಳನ್ನು ಉಪ್ಪಿನಂಗಡಿ ಮತ್ತು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಪುತ್ತೂರು ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.