ರಾಮಕುಂಜ; ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋಕುಲನಗರದಲ್ಲಿರುವ ಗೋ ಶಾಲೆಗೆ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ.ಅವರು ಜು.2ರಂದು ಭೇಟಿ ನೀಡಿದರು.
ಉದ್ಯೋಗಖಾತ್ರಿ ಯೋಜನೆ ಹಾಗೂ ಪಶುಸಂಗೋಪನಾ ಇಲಾಖೆ ವತಿಯಿಂದ ರಾಮಕುಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋಕುಲನಗರದಲ್ಲಿ ಗೋ ಶಾಲೆ ನಿರ್ಮಾಣಗೊಂಡಿದೆ. ಪಶುಸಂಗೋಪನಾ ಇಲಾಖೆಯ ಕಡಬ ತಾಲೂಕು ಸಹಾಯಕ ನಿರ್ದೇಶಕ ಡಾ.ಅಜಿತ್ ಅವರು ಗೋಶಾಲೆ ಕುರಿತು ಜಿಲ್ಲಾಧಿಕಾರಿಯವರಿಗೆ ಮಾಹಿತಿ ನೀಡಿದರು.

ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್, ಕಡಬ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ನವೀನ್ಕುಮಾರ್ ಭಂಡಾರಿ, ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ, ರಾಮಕುಂಜ ಗ್ರಾ.ಪಂ.ಅಧ್ಯಕ್ಷೆ ಸುಚೇತಾ ಬಿ., ಪಿಡಿಒ ಮೋಹನ್ಕುಮಾರ್, ಕಾರ್ಯದರ್ಶಿ ಲಲಿತಾ ಜಿ.ಡಿ. ಹಾಗೂ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.