ನಗರಸಭೆ ಸದಸ್ಯ ಶೀನಪ್ಪ ನಾಯ್ಕರಿಗೆ ಶ್ರದ್ಧಾಂಜಲಿ ಅರ್ಪಣೆ

0

ಶೀನಪ್ಪರವರದ್ದು ಸರಳ ಸಜ್ಜನಿಕೆಯ ವ್ಯಕ್ತಿತ್ವ: ಸಂಜೀವ ಮಠಂದೂರು

ಪುತ್ತೂರು: ಇತ್ತೀಚೆಗೆ ನಿಧನರಾದ ನಗರಸಭಾ ಸದಸ್ಯ ಬಿ. ಶೀನಪ್ಪ ನಾಯ್ಕ ಮುಕ್ರಂಪಾಡಿ ಅವರಿಗೆ ಕೊಂಬೆಟ್ಟು ಮರಾಟಿ ಸಮಾಜ ಮಂದಿರದಲ್ಲಿ ಜು. 3 ರಂದು ಉತ್ತರಕ್ರಿಯೆ ನಡೆಯಿತು.


ಈ ವೇಳೆ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿದ ಮಾಜಿ ಶಾಸಕ ಸಂಜೀವ ಮಠಂದೂರು, ಶೀನಪ್ಪ ಅವರದ್ದು ಸರಳ ಸಜ್ಜನಿಕೆಯ ವ್ಯಕ್ತಿತ್ವ. ಆತ್ಮವಿಶ್ವಾಸ ಅವರಲ್ಲಿ ದೃಢವಾಗಿತ್ತು. ಅವರ ವ್ಯಕ್ತಿತ್ವ, ಸಮಾಜಮುಖಿ ಚಿಂತನೆಗಳು ನಮಗೆ ಆದರ್ಶವಾಗಿದೆ. ಅವರು ಮಾಡಿದ ಕೆಲಸ ಕಾರ್ಯಗಳು ಕಣ್ಣಮುಂದಿದೆ. ಜನಪ್ರತಿನಿಽಯಾಗಿ, ಬ್ಯಾಂಕ್ ಉದ್ಯೋಗಿಯಾಗಿ ಸಮಾಜದಲ್ಲಿ ಅವರು ಮಾಡಿದ ಕೆಲಸಗಳನ್ನು ಜ್ಞಾಪಿಸಿಕೊಳ್ಳಬೇಕು ಎಂದು ಹೇಳಿ, ಮೃತರ ಆತ್ಮಕ್ಕೆ ಶಾಂತಿ ಕೋರಿದರು.


ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ ಮಾತನಾಡಿ, ಶೀನಪ್ಪ ನಾಯ್ಕರವರು ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿ ಜನಮಾನಸದಲ್ಲಿ ನೆಲೆಯಾಗಿದ್ದಾರೆ. ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡು ಸರಳ ಸಜ್ಜನಿಕೆಯಲ್ಲಿ ಹೆಸರುವಾಸಿಯಾಗಿದ್ದರು. ಇಂತಹ ವ್ಯಕ್ತಿ ಇಂದು ನಮ್ಮನ್ನೆಲ್ಲರನ್ನು ಅಗಲಿದ್ದು, ನಗರಸಭೆಯ ಎಲ್ಲಾ ಸದಸ್ಯರ ಪರವಾಗಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುತ್ತೇನೆ ಎಂದರು.


ಆಗಮಿಸಿದ್ದ ಅತಿಥಿ ಗಣ್ಯರು ಮೃತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದರು. ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಸಂಪ್ಯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ನುಳಿಯಾಲು, ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ವಕೀಲ ಮಂಜುನಾಥ ಎನ್ ಎಸ್, ಮಹಮ್ಮಾಯಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸೀನ ನಾಯ್ಕ, ಲ್ಯಾಂಪ್ಸ್ ಸೊಸೈಟಿ ಅಧ್ಯಕ್ಷ ಪೂವಪ್ಪ ನಾಯ್ಕ, ಮರಾಟಿ ಸಂಘದ ಕರ್ಯದರ್ಶಿ, ಕೋಶಾಽಕಾರಿ ಮತ್ತು ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here