ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ.ರಾವ್ ನನ್ನು ಎರಡು ದಿನದೊಳಗೆ ಬಂಧಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಜಿಲ್ಲಾ ಎಸ್ಪಿ ಯವರಿಗೆ ಸೂಚನೆಯನ್ನು ನೀಡಿದ್ದಾರೆ.
ಎಸ್ಪಿ ಡಾ.ಅರುಣ್ ಅವರಿಗೆ ಕರೆ ಮಾಡಿದ ಶಾಸಕ ಅಶೋಕ್ ರೈ ಅವರು ಆರೋಪಿ ಎಲ್ಲೇ ಇದ್ದರೂ ಆತನನ್ನು ಬಂಧಿಸಬೇಕು. ಆರೋಪಿಯನ್ನು ಇಷ್ಟು ದಿನ ಬಂಧಿಸದೇ ಇರುವುದು ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗುತ್ತಿದೆ. ತಂಡವನ್ನು ರಚನೆ ಮಾಡಿ ಆರೋಪಿಯನ್ನು ಎರಡು ದಿನದೊಳಗೆ ಬಂಧಿಸಬೇಕು ಮತ್ತು ನೊಂದ ಯುವತಿಗೆ ನ್ಯಾಯವನ್ನೂ ಕೊಡಿಸುವ ಕೆಲಸ ಪೊಲೀಸ್ ಇಲಾಖೆ ಮಾಡಬೇಕು. ಇಲಾಖೆಗೆ ನನ್ನಿಂದ ಏನು ಸಹಾಯ ಬೇಕಿದ್ದರೆ ತಿಳಿಸಬೇಕು ಎಂದು ಶಾಸಕರು ತಿಳಿಸಿದ್ದಾರೆಂದು ಶಾಸಕರ ಕಚೇರಿಗೆ ಪ್ರಕಟಣೆ ತಿಳಿಸಿದೆ.