ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ತಲೆ ಮರೆಸಿಕೊಂಡಿದ್ದ ಆರೋಪಿ ಅಬ್ದುಲ್‌ ರೆಹಮಾನ್ ಕಣ್ಣೂರುನಲ್ಲಿ ಬಂಧನ

0

ಪುತ್ತೂರು:ಮೂರು ವರ್ಷಗಳ ಹಿಂದೆ ನಡೆದಿದ್ದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಎನ್‌ಐಎ ಬಂಧಿಸಿದೆ.

ಘಟನೆ ಬಳಿಕ ಕತಾರ್‌ನ ದೋಹಾದಲ್ಲಿ ತಲೆ ಮರೆಸಿಕೊಂಡಿದ್ದ ಕೊಡಗಿನ ಸೋಮವಾರಪೇಟೆ ತಾಲೂಕಿನ ಕಲ್ಕಂದೂರಿನ ಅಬ್ದುಲ್ ರೆಹಮಾನ್ ಎಂಬಾತನನ್ನು ಎನ್‌ಐಎ ಬಂಧಿಸಿದೆ.

ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಈತ ಊರಿಗೆ ಬರುತ್ತಿದ್ದ ಸಂದರ್ಭ ಕೇರಳದ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಎನ್‌ಐಎ ಬಂಧಿಸಿದೆ.ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪ ಈತನ ಮೇಲಿದೆ. ಅಬ್ದುಲ್ ರಹಿಮಾನ್ ಬಗ್ಗೆ ಮಾಹಿತಿ ನೀಡಿದವರಿಗೆ ಗೃಹ ಇಲಾಖೆ ಬಹುಮಾನ ಘೋಷಿಸಿತ್ತು. ಬಂಧಿತ ಆರೋಪಿ ಅಬ್ದುಲ್ ರಹಿಮಾನ್ ನಿಷೇಧಿತ ಪಿಎಫ್‌ಐ ಸಂಘಟನೆಯ ಕಾರ್ಯದರ್ಶಿಯಾಗಿದ್ದ.ಆರೋಪಿಯನ್ನು ಬೆಂಗಳೂರು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಅಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here