ನೆಲ್ಯಾಡಿ: ಕಾರೊಂದು ಡಿವೈಡರ್‌ಗೆ ಡಿಕ್ಕಿಯಾದ ಘಟನೆ ಜು.3ರಂದು ತಡರಾತ್ರಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ನಡೆದಿದೆ.
ಇಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ಮಳೆನೀರು ರಾಷ್ಟ್ರೀಯ ಹೆದ್ದಾರಿ ಮೂಲಕ ಹರಿಯುತ್ತಿದ್ದು ಇದರ ಅರಿವಿಗೆ ಬಾರದೇ ವೇಗವಾಗಿ ಬರುವ ವಾಹನಗಳು ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಡಿಕ್ಕಿಯಾಗುತ್ತಿವೆ. ಎರಡು ದಿನದ ಹಿಂದೆ ಇದೇ ಜಾಗದಲ್ಲಿ ಒಮ್ನಿ ಕಾರೊಂದು ಪಲ್ಟಿಯಾಗಿ ಮಹಿಳೆಯೊಬ್ಬರು ಗಾಯಗೊಂಡಿದ್ದರು. ಜು.3ರಂದು ರಾತ್ರಿ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾಗಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.